ಮಂಡ್ಯ: ಹಾಲಿನ ಖರೀದಿ ದರವನ್ನು 3.50 ರೂಪಾಯಿ ಹೆಚ್ಚಳ ಮಾಡುವ ಮೂಲಕ ಹಾಲು ಉತ್ಪಾದಕರಿಗೆ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಹೊಸ ವರ್ಷದ ಕೊಡುಗೆ ನೀಡಿದೆ.
ಒಕ್ಕೂಟದ 394ನೇ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದ್ದು, ಹಾಲು ಉತ್ಪಾದಕರಿಗೆ ಪ್ರಸ್ತುತ ಪ್ರತೀ ಲೀಟರ್‍ಗೆ 25 ರೂಪಾಯಿ ದೊರಕುತ್ತಿದೆ. ಆದರೆ ಈ ದರ ಜ. 1ರಿಂದ 28.50 ರೂಪಾಯಿಗೆ ಹೆಚ್ಚಳವಾಗಲಿದೆ. ಅಲ್ಲದೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಪ್ರತಿ ಲೀಟರ್ ಹಾಲಿಗೆ 29.40 ರೂ. ದೊರೆಯಲಿದೆ.
Advertisement
Advertisement
ಈ ಹೆಚ್ಚುವರಿ ದರವು ಮಾರ್ಚ್ ತಿಂಗಳ ಅಂತ್ಯದವರೆಗೂ ಉತ್ಪಾದಕರಿಗೆ ನೀಡಲಾಗುವುದು. ಜೊತೆಗೆ ಒಕ್ಕೂಟದ ಪ್ರಗತಿಯ ದೃಷ್ಟಿಯಿಂದ ಹಾಲು ಉತ್ಪಾದಕರು ಗುಣಮಟ್ಟದ ಹಾಲನ್ನು ಪೂರೈಕೆ ಮಾಡುವಂತೆ ಒಕ್ಕೂಟ ಮನವಿ ಮಾಡಿದೆ.