ಪಾಟ್ನಾ: ಲೋಕಸಭೆಯಲ್ಲಿ ಬುಧವಾರ ತಡರಾತ್ರಿ ಅಂಗೀಕಾರಗೊಂಡ ವಕ್ಫ್ ತಿದ್ದಿಪಡಿ ಮಸೂದೆ ಬೆಂಬಲಕ್ಕೆ ಬೆಂಬಲ ನೀಡಿದ ಬಳಿಕ ಜನತಾ ದಳ (ಯುನೈಟೆಡ್)ದಲ್ಲಿ (JDU) ಭಿನ್ನಮತ ಸ್ಫೋಟಗೊಂಡಿದೆ. ಇಬ್ಬರು ಪ್ರಭಾವಿ ಮುಸ್ಲಿಂ ಶಾಸಕರು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಕೆಲವು ಮುಸ್ಲಿಂ ಶಾಸಕರು (Muslim MLAs) ಸಿಎಂ ನಿತೀಶ್ ಕುಮಾರ್ (Nitish Kumar) ವಿರುದ್ಧವೇ ತಿರುಗಿಬಿದ್ದಿದ್ದಾರೆ ಎಂದು ವರದಿಯಾಗಿದೆ.
ಹಿರಿಯ ನಾಯಕ ಮೊಹಮ್ಮದ್ ಖಾಸಿಂ ಅನ್ಸಾರಿ, ಜೆಡಿಯು ಅಲ್ಪಸಂಖ್ಯಾತ ವಿಭಾಗದ ಮುಖ್ಯಸ್ಥ ಮೊಹಮ್ಮದ್ ಅಶ್ರಫ್ ಅನ್ಸಾರಿ ಗುರುವಾರ ಪಕ್ಷ ಮತ್ತು ತಮ್ಮ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಅಮೆರಿಕ ಶಾಕ್ – ಔಷಧ, ತಾಮ್ರ, ಸೆಮಿಕಂಡಕ್ಟರ್‌ಗಳಿಗೆ ವಿನಾಯ್ತಿ, ಆಟೋಮೊಬೈಲ್, ಸ್ಟೀಲ್, ಚಿನ್ನಾಭರಣಗಳಿಗೆ ಬರೆ
ಪಕ್ಷದ ನಿಲುವು ಜಾತ್ಯತೀತ ಮೌಲ್ಯಗಳನ್ನು ಎತ್ತಿಹಿಡಿಯುತ್ತದೆ ಎಂದು ನಂಬಿದ್ದ ಲಕ್ಷಾಂತರ ಭಾರತೀಯ ಮುಸ್ಲಿಮರ ನಂಬಿಕೆಯನ್ನು ಛಿದ್ರಗೊಳಿಸಿದೆ ಎಂದು ಅವರು ನಿತೀಶ್ ಕುಮಾರ್ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ದೇವಸ್ಥಾನ, ಕೆರೆ, ಕೃಷಿ ಭೂಮಿ ಸೇರಿ 5,970 ಸರ್ಕಾರಿ ಆಸ್ತಿಗಳನ್ನ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ – ಜೆ.ಪಿ ನಡ್ಡಾ ಕಳವಳ
ಅನ್ಸಾರಿ ಅವರಂತೆ ಜೆಡಿಯುನ ಹಲವಾರು ಮುಸ್ಲಿಂ ನಾಯಕರು ಪಕ್ಷದ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಷಯದ ಬಗ್ಗೆ ಕಾನೂನು ಅಭಿಪ್ರಾಯವನ್ನು ಪಡೆಯುವುದಾಗಿ ಹೇಳಿದ್ದಾರೆ. ಎರಾಡಾ-ಎ-ಶರಿಯಾ (ಬಿಹಾರ, ಜಾರ್ಖಂಡ್ ಮತ್ತು ಒಡಿಶಾ) ಸಭೆಯ ನಂತರ ಅವರು ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ನನ್ನ ವಿರುದ್ಧದ ಆರೋಪ ಸಾಬೀತುಪಡಿಸಿದ್ರೆ ರಾಜೀನಾಮೆ, ಇಲ್ಲದಿದ್ರೆ ನೀವು ಕೊಡಿ – ಅನುರಾಗ್ ಠಾಕೂರ್‌ಗೆ ಖರ್ಗೆ ಸವಾಲು