ಗದಗ: ಮುಂಡರಗಿ ರೈತ ಸಂಪರ್ಕ ಕೇಂದ್ರ ಬಳಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿಯ ಬೆಲೆ ಬಾಳುವ ಕೃಷಿ ಸಾಮಾಗ್ರಿಗಳು ಸುಟ್ಟು ಭಸ್ಮವಾಗಿವೆ.
ಜಿಲ್ಲೆಯ ಮುಂಡರಗಿ ಪಟ್ಟಣದ ಹಳೆ ಎಪಿಎಂಸಿ ಆವರಣದಲ್ಲಿ ಈ ಘಟನೆ ನಡೆದಿದ್ದು, ಅಗ್ನಿ ಅವಘಡದಿಂದಾಗಿ ಪೈಪ್ ಹಾಗೂ ಸಿಮೆಂಟ್ ಸುಟ್ಟು ಕರಕಲಾಗಿವೆ. ಹೈದರಾಬಾದ್ ಮೂಲದ ಎಎಸ್‍ಆರ್ ಕಂಪನಿಗೆ ಸೇರಿದ ಪೈಪ್‍ಗಳಾಗಿದ್ದು, 14 ಕಿಲೋಮೀಟರ್ ನೀರು ಸರಬರಾಜು ಕಾಮಗಾರಿಗಾಗಿ ಸಂಗ್ರಹಿಸಿ ಇಡಲಾಗಿತ್ತು. ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Advertisement
ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv