ರಾಮನಗರ: ಮದುವೆಗೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ಬಸವನಪುರ ಗೇಟ್ ಬಳಿ ನಡೆದಿದೆ.
ಬೆಂಗಳೂರಿನಿಂದ ಮೈಸೂರಿಗೆ ಮದುವೆಗೆಂದು ಮಿನಿಬಸ್ ನಲ್ಲಿ 25 ಜನರು ಹೊರಟ್ಟಿದ್ದರು. ಈ ವೇಳೆ ಬಸವನಪುರ ಸಮೀಪ ಹಂಪ್ ದಾಟುವ ವೇಳೆ ಮಿನಿಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಸ್ ಪಲ್ಟಿ ಹೊಡೆದಿದೆ.
ಈ ಅಪಘಾತದಲ್ಲಿ ಅದೃಷ್ಟವಶಾತ್ ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೆದ್ದಾರಿಯಲ್ಲಿ ಮಿನಿಬಸ್ ಪಲ್ಟಿ ಹೊಡೆದ ಪರಿಣಾಮ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ನಂತರ ಸ್ಥಳಕ್ಕೆ ಬಂದ ರಾಮನಗರ ಟ್ರಾಫಿಕ್ ಪೊಲೀಸರು ಬಸ್ಸನ್ನು ತೆರವುಗೊಳಿಸಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.