ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಮಿನಿ ಬಸ್ (Mini Bus) ಪಲ್ಟಿಯಾಗಿದ್ದು, 30ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯವಾಗಿದೆ. ಈ ಪೈಕಿ ನಾಲ್ವರು ಮಹಿಳೆಯರ ಸ್ಥಿತಿ ಗಂಭೀರವಾಗಿದೆ.
ಘಟನೆ ಹಾವೇರಿ (Haveri) ತಾಲೂಕಿನ ದೇವಗಿರಿ (Devagiri) ಗ್ರಾಮದ ಎಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ. ಕರ್ಜಗಿ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ವಾಪಸ್ ಊರಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ದೇವಗಿರಿ ಗ್ರಾಮದ ಬಳಿ ಇರುವ ಕೆರೆ ಪಕ್ಕದ ತಗ್ಗು ಪ್ರದೇಶಕ್ಕೆ ಮಿನಿ ಬಸ್ ಉರುಳಿ ಬಿದ್ದಿದೆ.
Advertisement
Advertisement
ತಕ್ಷಣ ಸ್ಥಳೀಯರು ಹಾಗೂ ಅಂಬುಲೆನ್ಸ್ ಸಿಬ್ಬಂದಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅಲ್ಲದೆ ಗಂಭೀರವಾಗಿ ಗಾಯಗೊಂಡವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ – ಬಾಲಕಿ ದಾರುಣ ಸಾವು
Advertisement
Advertisement
ಪ್ರಯಾಣಿಕರು ಗ್ರಾಮದಿಂದ ತಡಸ ಗ್ರಾಮಕ್ಕೆ ಹೊರಟ್ಟಿದ್ದರು. ಕೆಲ ಸಂಬಂಧಿಕರನ್ನು ತಡಸ ಗ್ರಾಮಕ್ಕೆ ಬಿಟ್ಟು ಬಾಗಲಕೋಟೆಗೆ ಮಿನಿ ಬಸ್ ಹೋಗಬೇಕಿತ್ತು. ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಮನೆಯಲ್ಲಿರುವಾಗಲೇ ಎನ್‌ಸಿಪಿ ಶಾಸಕರ ಬಂಗಲೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು
Web Stories