ಚಿತ್ರದುರ್ಗ: ಲಾರಿಗೆ (Lorry) ಮಿನಿ ಗೂಡ್ಸ್ ವಾಹನ (Goods Vehicle) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ನಡೆದಿದೆ.
ಅಪಘಾತದ ಪರಿಣಾಮ ಮಿನಿಗೂಡ್ಸ್ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರಮೇಶ್ (55), ಬೆಳಗೆರೆ ಗ್ರಾಮದ ಶಿವಲಿಂಗಪ್ಪ (65) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಚಳ್ಳಕೆರೆಯಿಂದ ಹಿರಿಯೂರು ಕುರಿ ಮಾರುಕಟ್ಟೆಗೆ ತೆರಳುತ್ತಿದ್ದ ಸಂದರ್ಭ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಲಾರಿಗೆ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಣ ಹೋಗಿದ್ದು ಎಲ್ಲಿಗೆ? – ಬೆಂಗಳೂರು ಕಂಪನಿಗಳೇ ಅಧಿಕ
ಘಟನಾ ಸ್ಥಳಕ್ಕೆ ಹಿರಿಯೂರು ಠಾಣೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಕೇಸ್ – ಆರೋಪಿ ಅಪ್ರಾಪ್ತನ ತಾಯಿ ಬಂಧನ