ಉಡುಪಿ: ಜಿಲ್ಲೆಯ ನಾಲ್ಕು ಹೊಸ ತಾಲೂಕು ಕೇಂದ್ರಗಳಲ್ಲೂ ತಲಾ ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ, ಜಿಲ್ಲಾ ಉಸ್ತುವಾರಿ ಮಂತ್ರಿ ಡಾ.ಜಯಮಾಲಾ ಹೇಳಿದ್ದಾರೆ.
ಬೀಡಿನಗುಡ್ಡೆಯ ರಂಗಮಂದಿರದಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಬ್ರಹ್ಮಾವರ ಕಾಪು, ಬೈಂದೂರು ಮತ್ತು ಹೆಬ್ರಿ ಎಂಬ ನಾಲ್ಕು ಹೊಸ ತಾಲೂಕು ರಚನೆಯಾಗಿದೆ. ಎಲ್ಲ ಇಲಾಖೆಗಳೂ ಕಾರ್ಯಾರಂಭ ಮಾಡಿವೆ. ಉಳಿದ 14 ಇಲಾಖೆಗಳು ಶೀಘ್ರ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲ ನಾಲ್ಕು ಹೊಸ ತಾಲೂಕು ಕೇಂದ್ರಗಳಲ್ಲೂ ತಲಾ 10 ಕೋಟಿ ರೂಪಾಯಿ ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಮಾಡಲಾಗುವುದು ಎಂದರು.
Advertisement
Advertisement
ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ಮಾಡಿದ ಸಚಿವೆ ಬಳಿಕ ಸ್ವಾತಂತ್ರೋತ್ಸವ ಸಂದೇಶ ಭಾಷಣ ಮಾಡಿದರು. ಇದಕ್ಕೂ ಮುನ್ನ ಸಚಿವರು ಜಿಲ್ಲಾಡಳಿತ ಮತ್ತು ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಗೌರವವಂದನೆ ಸ್ವೀಕರಿಸಿದರು. ಬಳಿಕ ಜಿಲ್ಲಾ ಪೊಲೀಸ್ ವಿದ್ಯಾರ್ಥಿಗಳ ಆಕರ್ಷಕ ಪಥಸಂಚನ ನಡೆಯಿತು. ಕೊನೆಗೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಇತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv