ಹೈದರಾಬಾದ್: 2030ರ ವೇಳೆಗೆ ಭಾರತದ ಜಿಡಿಪಿ (GDP)ಯಲ್ಲಿ ಗಣಿ ಮತ್ತು ಖನಿಜಗಳ ಪಾಲು ಶೇ. 2.5ಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲ ರಾಜ್ಯಗಳು ಸಹಕರಿಸುವಂತೆ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕರೆ ನೀಡಿದ್ದಾರೆ.
Advertisement
ಹೈದರಾಬಾದ್‍ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಗಣಿಗಾರಿಕೆ ಸಚಿವರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ ನಿರ್ದೇಶನದಂತೆ, ಆಯಾ ರಾಜ್ಯ ಗಣಿ ಇಲಾಖೆಯ ಸರ್ಕಾರಿ ಕಂಪನಿಗಳು ಮತ್ತು ಸ್ವಾಯತ್ತ ಸಂಸ್ಥೆಗಳ ಜೊತೆ ಚರ್ಚಿಸಿ ಸಮಾವೇಶ ಆಯೋಜಿಸಲಾಗಿದೆ. ಎಲ್ಲ ರಾಜ್ಯಗಳ ಪಾಲ್ಗೊಳ್ಳುವಿಕೆ ಮುಖ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಶ್ರದ್ದೆಯಿಂದ ಕೆಲಸ ಮಾಡಿದರೆ 2047 ರೊಳಗೆ ಭಾರತ ಅಭಿವೃದ್ದಿ ಹೊಂದಿದ ಭಾರತವಾಗುವುದರಲ್ಲಿ ಅನುಮಾನ ಬೇಡ ಎಂದು ಅಭಿಪ್ರಾಯಪಟ್ಟರು.
Advertisement
Advertisement
ಕಲ್ಲಿದ್ದಲು ಉತ್ಪಾದನೆಯಲ್ಲಿ ಭಾರತ ಹೊಸ ಮೈಲುಗಲ್ಲು ಸಾಧಿಸುತ್ತಿದೆ. ಕಲ್ಲಿದ್ದಲು ಉತ್ಪಾದನೆಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಶೇ.8 ರಷ್ಟು ಹೆಚ್ಚಳವಾಗಿದ್ದು, ಆಗಸ್ಟ್ 2022ರವರೆಗೆ 58 ಎಂಟಿಯಷ್ಟಾಗಿದೆ ಜೋಶಿ ತಿಳಿಸಿದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಧರಿಸಿದ್ದ 41 ಸಾವಿರ ರೂ.ನ ಟೀಶರ್ಟ್ ಕುರಿತು ಬಿಜೆಪಿ ವ್ಯಂಗ್ಯ
Advertisement
ಭಾರತದಲ್ಲಿ ಕಲ್ಲಿದ್ದಲು (Coal) ಗಣಿಗಾರಿಕೆ ಕ್ಷೇತ್ರದಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ನಮ್ಮ ಪ್ರಯತ್ನ ನಿರಂತರವಾಗಿರುತ್ತದೆ. ಖನಿಜ ಕ್ಷೇತ್ರದಲ್ಲಾದ ಸುಧಾರಣೆ ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಯ ಪಾತ್ರವು ಮುಖ್ಯವಾಗಿದೆ. ಕಳೆದ ವರ್ಷ ಹರಜಾದ ಗಣಿಗಳಿಂದ ಸರ್ಕಾರಕ್ಕೆ ಒಟ್ಟು 25,170 ಕೋಟಿ ಆದಾಯ ಬಂದಿದೆ ಎಂದು ಅವರು ಮಾಹಿತಿ ನಿಡಿದರು.