ವಿಜಯಪುರ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ (Earthquake) ಅನುಭವ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ವಿಜಯಪುರ (Vijayapura) ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ, ಘೋಣಸಗಿ, ಕಳ್ಳಕವಟಗಿ, ಹುಬನೂರ, ಟಕ್ಕಳಕಿ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಇದನ್ನೂ ಓದಿ: T20 ಏಷ್ಯಾಕಪ್ ಟೂರ್ನಿಗೆ ಭಾರತ ಮಹಿಳಾ ತಂಡ ಪ್ರಕಟ – ಕನ್ನಡತಿ ಶ್ರೇಯಾಂಕಾಗೆ ಸ್ಥಾನ!
ಗ್ರಾಮಸ್ಥರಿಗೆ ರಾತ್ರಿ 9:26ಕ್ಕೆ ಭೂಕಂಪನ ಅನುಭವ ಆಗಿದೆ. ಜೋರಾದ ಶಬ್ದಕ್ಕೆ ಭಯಗೊಂಡ ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ – ಸರ್ಕಾರಕ್ಕೆ 1,000 ಕೋಟಿಗೂ ಹೆಚ್ಚು ಆರ್ಥಿಕ ನಷ್ಟ; ಸ್ಫೋಟಕ ಮಾಹಿತಿ ಲಭ್ಯ!