ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಈ ಜನ್ಮದಲ್ಲಿ ಮೇಕೆದಾಟು ಯೋಜನೆ ಒಂದಿಂಚು ಮಾಡಲು ಸಾಧ್ಯವಿಲ್ಲ ಅಂತ ರಾಮನಗರ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ ಸವಾಲು ಹಾಕಿದ್ದಾರೆ. ಕಾಂಗ್ರೆಸ್‍ನ ಎರಡನೇ ಹಂತದ ಪಾದಯಾತ್ರೆ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಾದಯಾತ್ರೆ ರಾಜಕೀಯ ಪ್ರೇರಿತ ಅಂತ ವಾಗ್ದಾಳಿ ನಡೆಸಿದರು.
Advertisement
ಕಾಂಗ್ರೆಸ್ ಪಕ್ಷ ದೊಂಬರಾಟ ಮಾಡುತ್ತಿದೆ. ನೀರಿಗೂ ಕಾಂಗ್ರೆಸ್ ರಾಜಕೀಯ ಲೇಪ ಹಚ್ಚುತ್ತಿದೆ. ಕುಡಿಯುವ ನೀರಿಗೂ ರಾಜಕೀಯ ಬಣ್ಣ ಹಚ್ಚುತ್ತಿದೆ ಅಂತ ಕಿಡಿಕಾರಿದರು. ನಾಡಿನ ಜನರು ನೆಲ, ಜಲ, ಭಾಷೆ ಬಂದಾಗ ಎಲ್ಲರೂ ಒಂದಾಗುತ್ತಾರೆ. ಆದರೆ ಕಾಂಗ್ರೆಸ್ ಸುಮ್ಮನೆ ರಾಜಕೀಯ ಮಾಡುತ್ತಿದೆ. 75 ವರ್ಷಗಳಲ್ಲಿ ಕಾಂಗ್ರೆಸ್ ಮೇಕೆದಾಟಿಗೆ ಏನೂ ಮಾಡಲಿಲ್ಲ. ಡಿಪಿಆರ್ ಕೂಡಾ ಅವರು ಮಾಡಲಿಲ್ಲ ಅಂತ ತಿಳಿಸಿದರು. ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಆವರಣದಲ್ಲಿ 14 ಅಡಿ ಎತ್ತರದ ಅಂಬರೀಶ್ ಪ್ರತಿಮೆ
Advertisement
Advertisement
ಮೇಕೆದಾಟು ಅನುಷ್ಠಾನ ಮಾಡಲು ನಮ್ಮ ರಾಜ್ಯ ಮತ್ತು ಕೇಂದ್ರ ಬದ್ಧವಾಗಿ ಇದೆ. ಡಿಎಂಕೆ ಜೊತೆ ಕಾಂಗ್ರೆಸ್ ಕೈಜೋಡಿಸಿದೆ. ತಮಿಳುನಾಡಿನಲ್ಲಿ ಅವರದ್ದೇ ಸರ್ಕಾರ ಇದೆ. ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬಂದು ಇದನ್ನ ಮಾಡೋಕೆ ಸಾಧ್ಯವೇ ಇಲ್ಲ. ಇವರ ಜನ್ಮದಲ್ಲಿ ಮೇಕೆದಾಟು ಕಾಂಗ್ರೆಸ್ ಜಾರಿ ಮಾಡೊಲ್ಲ ಅಂತ ವಾಗ್ದಾಳಿ ನಡೆಸಿದರು. ಡಿಕೆ ಶಿವಕುಮಾರ್, ಡಿಕೆ ಸುರೇಶ್ ರಾಮನಗರ ಅಭಿವೃದ್ಧಿ ಮಾಡಿಲ್ಲ. ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಏನೂ ಕೆಲಸ ಮಾಡಿಲ್ಲ. ರಾಜಕೀಯ ಜನ್ಮ ಪಡೆದು ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ ಅಂತ ಆರೋಪಿಸಿದರು. ಇದನ್ನೂ ಓದಿ: ಉಕ್ರೇನ್ ಅಧ್ಯಕ್ಷನ ಹತ್ಯೆಗೆ 400 ರಷ್ಯಾ ಸೈನಿಕರು ಸಿದ್ಧತೆ
Advertisement
ಪಾದಯಾತ್ರೆ ಮಲ್ಲೇಶ್ವರಂಗೆ ಬರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಿಗೆ ಬೇಕಾದರೂ ಪಾದಯಾತ್ರೆ ಬರಲಿ. ನಮ್ಮ ಕ್ಷೇತ್ರಕ್ಕೆ ಬರೋದಕ್ಕೆ ಯಾವುದೇ ಅಭ್ಯಂತರ ಇಲ್ಲ. ನೀವು ನಮ್ಮ ಕ್ಷೇತ್ರದಕ್ಕೆ ಬಂದ್ರೆ ನಮಗೆ ಜನ ಆಶೀರ್ವಾದ. ಪಾದಯಾತ್ರೆ ಬರಲಿ ನಮಗೇನೂ ಅಭ್ಯಂತರ ಇಲ್ಲ ಅಂದರು. ಪರಿಜ್ಞಾನ ಇಲ್ಲದೆ ಈ ಪಾದಯಾತ್ರೆ ಮಾಡ್ತಿದ್ದಾರೆ. ನಾಟಕ ಮಾಡಿಕೊಂಡು ಪಾದಯಾತ್ರೆ ಮಾಡ್ತಿದ್ದಾರೆ. ವ್ಯಾಪಾರ, ಲಾಭ, ನಷ್ಟ ನೋಡೋದು ಡಿಕೆಶಿವಕುಮಾರ್ ಗುಣ. ತಾನು ಹೇಗೆ ಸಿಎಂ ಆಗಬೇಕು ಅಂತ ಡಿಕೆ ಪ್ಲ್ಯಾನ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ಟಕ್ಕರ್ ಹೊಡೆಯಲು ಈ ಪಾದಯಾತ್ರೆ ಮಾಡುತ್ತಿದ್ದಾರೆ ಅಂತ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಮ್ಮ ತ್ರಿವರ್ಣ ಧ್ವಜ ಇದ್ದ ಬಸ್‌ಗಳನ್ನು ನೋಡಿದಾಗ ಮತ್ತೆ ಬದುಕಿದಂತಾಯ್ತು: ವಿದ್ಯಾರ್ಥಿನಿ