ದಾವಣಗೆರೆ: ಶಿಕ್ಷಕರನ್ನು ನೇಮಕಾತಿ ಮಾಡಿದ್ದು ಮಕ್ಕಳಿಗೆ ಪಾಠ ಮಾಡಲಿಕ್ಕೆ ಹೊರತು ಸಂಸಾರ ನೋಡಿಕೊಳ್ಳುವುದಕ್ಕಲ್ಲ ಎಂದು ಶಿಕ್ಷಕರ ವರ್ಗಾವಣೆ ವಿಚಾರವಾಗಿ ಶಿಕ್ಷಕರ ವಿರುದ್ಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕಿಡಿಕಾರಿದರು.
Advertisement
ಶಿಕ್ಷಕರ ವರ್ಗಾವಣೆಗೆ ಸರ್ಕಾರ ಕೈಗೊಂಡಿರುವ ಕ್ರಮದಿಂದ ಶಿಕ್ಷಕರು ಪರದಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ ಸಚಿವರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡಲೂ ಸಾಧ್ಯವಾಗದಷ್ಟು ಸರ್ಕಾರ ದಿವಾಳಿಯಾಗಿದೆಯೇ? – ಎಎಪಿ ಪ್ರಶ್ನೆ
Advertisement
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೇರೆ ಗ್ರಾಮದಲ್ಲಿ ಮಾತನಾಡಿದ ಅವರು, ಮೂರು ವರ್ಷದಿಂದ ವರ್ಗಾವಣೆ ಪ್ರಕ್ರಿಯೆ ನಿಲ್ಲಿಸಲಾಗಿತ್ತು. ಎರಡು ದಿನದಿಂದ ಮತ್ತೆ ಶುರುವಾಗಿದ್ದು, ಎಲ್ಲಾ ಶಿಕ್ಷಕರು ಸಂತೋಷ ವ್ಯಕ್ತಪಡಿಸಿದ್ದಾರೆ. ಕೆಲ ಶಿಕ್ಷಕರ ವೈಯುಕ್ತಿಕ ಸಮಸ್ಯೆಗಳನ್ನು ಸಾಮೂಹಿಕ ಎಂದು ಬಿಂಬಿಸಲಾಗದು. ಕೆಲ ಶಿಕ್ಷಕರಿಗೆ ಕೆಲಸಕ್ಕೆ ಸೇರುವಾಗ ಜಿಲ್ಲಾವಾರು ಆಯ್ಕೆ ಅಂತ ಗೊತ್ತಿರಲಿಲ್ಲವೇ? ಆಗ ರಾಯಚೂರು ಮತ್ತೊಂದು ಜಿಲ್ಲೆ ದೂರ ಅಂತಾ ಗೊತ್ತಿರಲಿಲ್ಲವೇ ಎಂದು ಪ್ರಶ್ನಿಸಿದ ಸಚಿವರು, ಎಲ್ಲರ ಸಮಸ್ಯೆ ಅರ್ಥ ಆಗುತ್ತದೆ. ಆದರೆ, ಶಿಕ್ಷಕರ ಸಮಸ್ಯೆಗಿಂತ ಮೊದಲು ಮಕ್ಕಳ ಸಮಸ್ಯೆ ಬಗೆಹರಿಸಬೇಕಿದೆ. ನಂತರ ಜಿಲ್ಲಾವಾರು ಶಿಕ್ಷಕರ ಸಮಸ್ಯೆ ಬಗೆಹರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
Advertisement
ಶಿಕ್ಷಣ ವ್ಯವಸ್ಥೆಗೆ ಕೋವಿಡ್ ಸವಾಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಹೆಚ್ಚಿನ ನಿಗಾ ವಹಿಸುತ್ತಿದೆ. ಮೂರನೇ ಅಲೆ ಪರಿಣಾಮ ಬೀರಿದರೆ ಶಾಲೆ ನಿಲ್ಲಿಸಬೇಕೆ? ಬೇಡವೆ ಎಂಬುದನ್ನು ಮುಂದೆ ನಿರ್ಧರಿಸಲಾಗುವುದು. ಸದ್ಯಕ್ಕೆ ದೇಶದಲ್ಲಿ ಕೊರೊನಾ ಸಮಸ್ಯೆ ಭೀಕರವಾಗಿಲ್ಲ. ಕೊರೊನಾ ಪರಿಣಾಮ ಆದರೆ ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ. ಸದ್ಯಕ್ಕೆ ಯಾವುದೇ ತೊಂದರೆ ಇಲ್ಲದೇ ಶಾಲೆ ಪ್ರಾರಂಭ ಆಗಿದೆ ಎಂದರು. ಇದನ್ನೂ ಓದಿ: ಗಿಣಿರಾಮನ ರಾಣಿಗೆ ಮೋಹಕ ತಾರೆ ಕೊಟ್ರು ಕಾಂಪ್ಲಿಮೆಂಟ್
ಕೊಡುಗು ಜಿಲ್ಲೆಯ ರೆಸಿಡೆಸ್ಸಿ ಶಾಲೆಯ ಮಕ್ಕಳಲ್ಲಿ ಕೋವಿಡ್ ಕಾಣಿಸಿಕೊಂಡಿದೆ. ಕೊಡಗಿನ ಗಡಿಗೆ ಹೊಂದಿಕೊಂಡಂತೆ ಕೇರಳ ಇದ್ದು, ಅಲ್ಲಿಂದ ವೈರಸ್ ಹಬ್ಬಿದೆ ಎಂಬ ಮಾಹಿತಿ ಸಿಕ್ಕಿದೆ. ಜಿಲ್ಲಾಧಿಕಾರಿಗಳನ್ನು ಆ ಶಾಲೆಗೆ ಪರಿಶೀಲನೆಗೆ ಕಳುಹಿಸಲಾಗಿದ್ದು, 450 ಮಕ್ಕಳನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಶಾಲೆಯಲ್ಲಿ 31 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಎಸ್‌ಒಪಿ ಪ್ರಕಾರ ಒಂದು ವಾರಗಳ ಕಾಲ ಶಾಲೆಯನ್ನು ಸೀಲ್‌ಡೌನ್ ಮಾಡಲು ತಿಳಿಸಲಾಗಿದೆ ಎಂದು ಹೇಳಿದರು.