ಶಂಭುಕನ ಹತ್ಯೆ ಮಾಡಿದ ರೀತಿ ಈಗ ಆಗಲ್ಲ.. ಸಂವಿಧಾನ ನಮ್ಮ ರಕ್ಷಣೆಗಿದೆ
– ಮನುವಾದಿಗಳಿಗೆ ನಾವು ಬಗ್ಗಲ್ಲ ಅಂತ ವಾಗ್ದಾಳಿ
ಬೆಂಗಳೂರು: ಸಿಎಂ ಡಿ.ಕೆ.ಶಿವಕುಮಾರ್ ಸಂಪುಟದ ಮೊದಲ ವಿಕೆಟ್ ಉರುಳಿಬಿದ್ದಿದೆ. ಕಣ್ಣೀರಿಟ್ಟು ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದರು.
ದೆಹಲಿಯಿಂದ ವಾಪಾಸಾದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಾಗೇಂದ್ರ, ಸದನ ನಡೆಯೋಕೆ ವಿಪಕ್ಷಗಳು ಬಿಡಲಿಲ್ಲ. ಸದನವನ್ನು ಹಾಳು ಮಾಡಿದರು. ಸಂವಿಧಾನ ವಿರೋಧಿಗಳು ವಿಪಕ್ಷಗಳು. ವಿಪಕ್ಷಗಳು ಈಗಲೂ ಮನುಸ್ಮೃತಿ ಜಾರಿಗೆ ಪ್ರಯತ್ನ ಮಾಡ್ತಾ ಇದ್ದಾರೆ. ಇದು ವೇದ ಕಾಲ ಅಲ್ಲ. ಪುರಾಣ ಕಾಲ ಅಲ್ಲ. ಸಂವಿಧಾನ ಕಾಲ, ಅಂಬೇಡ್ಕರ್ ಯುಗ ಇದು. ಉತ್ತರಕಾಂಡದಲ್ಲಿ ಶಂಭುಕ ಹತ್ಯೆಯಾಯ್ತು. ಇವತ್ತು ಶಂಭುಕ ಹತ್ಯೆ ಆಗಲ್ಲ. ರಕ್ಷಣೆಗೆ ಸಂವಿಧಾನ ಇದೆ. ಮನುಸ್ಮೃತಿಗಳು ಶಂಭುಕ ಹತ್ಯೆ ಮಾಡಿದ ರೀತಿ ಆಗಲ್ಲ. ದಲಿತರು, ಕ್ಷುದ್ರರು, ಆದಿವಾಸಿಗಳು, ಅಲ್ಪಸಂಖ್ಯಾತರು ಬದುಕ ಬಾರದು ಅನ್ನೋದು ಮನುಸ್ಮೃತಿ ಬಿಜೆಪಿ ಅವರ ಮನಸ್ಥಿತಿ. ಆದರೆ, ಸಂವಿಧಾನ ನಮ್ಮ ರಕ್ಷಣೆ ಮಾಡುತ್ತದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
