ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮ ಹಗರಣ (Valmiki Corporation Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರು ದೆಹಲಿಗೆ ತೆರಳಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಬಿ. ನಾಗೇಂದ್ರ (B. Nagendra) ಅವರು ಜುಲೈ 27 ರಿಂದ ಆಗಸ್ಟ್ 10ರ ವರೆಗೆ ದೆಹಲಿಗೆ ತೆರಳಲು ಅನುಮತಿ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಅವರ ಅರ್ಜಿಗೆ ಜಾರಿ ನಿರ್ದೇಶನಾಲಯ (ಇಡಿ) ಆಕ್ಷೇಪಣೆ ಸಲ್ಲಿಸಿತ್ತು. ಇದನ್ನೂ ಓದಿ: KPSC ಹಗರಣಕ್ಕೆ CBI ತನಿಖೆಗೆ ಆಗ್ರಹಿಸಿ ಆ.5 ರಿಂದ ABVP ಅನಿರ್ದಿಷ್ಟಾವಧಿ ಧರಣಿ

ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ದೆಹಲಿ ಪ್ರವಾಸಕ್ಕೆ ಸೂಕ್ತ ಹಾಗೂ ಸಮರ್ಪಕ ಕಾರಣವನ್ನ ಅರ್ಜಿದಾರರು ನೀಡಿಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಪ್ರಯಾಣಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದೆ.
ಮಹರ್ಷಿ ವಾಲ್ಮೀಕಿ ನಿಗಮ ಹಗರಣ ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಈ ಆದೇಶ ಪ್ರಕರಣದ ಮುಂದಿನ ಬೆಳವಣಿಗೆಗಳಲ್ಲಿ ಮಹತ್ವ ಪಡೆದಿದೆ. ಇದನ್ನೂ ಓದಿ: ಮಹಿಳೆಯರ ಮೆನೋಪಾಸ್ ಸಮಸ್ಯೆಗೆ ರಾಜ್ಯ ಸರ್ಕಾರ ವಿಶೇಷ ನೀತಿ – ನಟಿ ರಮ್ಯಾ ಬ್ರ್ಯಾಂಡ್ ಅಂಬಾಸಿಡರ್
