ಹಾಸನ: ಅಪಘಾತದಲ್ಲಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದವರನ್ನು ಸಚಿವ ಬೈರತಿ ಬಸವರಾಜ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ತಾಲ್ಲೂಕಿನ ಸಕಟಹಗೆರೆ ಗ್ರಾಮದ ಬಳಿ ಅಪರಿಚಿತ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಇದೇ ವೇಳೆ ಬೆಂಗಳೂರಿನಿಂದ ಚನ್ನರಾಯಪಟ್ಟಣ ಮಾರ್ಗವಾಗಿ ಚಿಕ್ಕಮಗಳೂರು ಜಿಲ್ಲೆಯ ದೇವನೂರು ಕೆರೆಗೆ ಬಾಗಿನ ಅರ್ಪಿಸಲು ಸಚಿವ ಬೈರತಿ ಬಸವರಾಜ್ ತೆರಳುತ್ತಿದ್ದರು. ಸಚಿವರೊಂದಿಗೆ ಸಿ.ಟಿ.ರವಿ ಕೂಡ ಇದ್ದರು. ಇದನ್ನೂ ಓದಿ: ಮುಂಬೈ ತಾಜ್ ಹೋಟೆಲ್ ಮಾದರಿಯಲ್ಲೇ ಭೀಕರ ಗುಂಡಿನ ದಾಳಿ – 8 ನಾಗರಿಕರ ಬಲಿ
ರಸ್ತೆಯಲ್ಲಿ ಅಪಘಾತ ನಡೆದಿರುವುದನ್ನು ಕಂಡ ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲು ತಮ್ಮ ಬೆಂಗಾವಲು ವಾಹನ ಕಳುಹಿಸಿಕೊಟ್ಟರು. ಗಾಯಾಳುಗಳನ್ನು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದರು.
ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.