ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪುರ್ ಅವರು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ನಿರತ ರೈತರಲ್ಲಿ ಕ್ಷಮೆ ಕೇಳಿದ್ದಾರೆ.
ಕ್ಷಮೆ ಕೇಳಿ ಮಾತನಾಡಿದ ಅವರು, ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಶೀಘ್ರದಲ್ಲೇ ಸಭೆ ಕರೆಯಲಾಗುತ್ತದೆ. ಕೊಡಗು ಸಂತ್ರಸ್ತ ರೈತರು, ಬರಗಾಲ ಪೀಡಿದ ಪ್ರದೇಶದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ. ಈ ಸಂಬಂಧ ರೈತ ಮುಖಂಡರ ಜೊತೆಗೆ ಪ್ರತ್ಯೇಕ ಸಭೆ ನಡೆಸುವಂತೆ ಕುಮಾರಸ್ವಾಮಿ ಅವರಿಗೆ ಕೇಳಿಕೊಂಡಿದ್ದೇನೆ ಎಂದು ಹೇಳಿದರು.
Advertisement
Advertisement
ನಮ್ಮ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಲು ಬದ್ಧವಾಗಿದೆ. ರಾಷ್ಟ್ರೀಯ ಬ್ಯಾಂಕ್‍ಗಳ ಸಾಲ ಮನ್ನಾ ಮಾಡುತ್ತೇವೆ ಅಂತ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇವತ್ತು ಸರ್ಕಾರ ಒಳ್ಳೆಯ ರೀತಿ ನಡೆಯುತ್ತಿದೆ. ಹಂತ ಹಂತವಾಗಿ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಸಚಿವರು ತಿಳಿಸಿದರು.
Advertisement
ಬೆಳಗಾವಿಯಲ್ಲಿ ಪ್ರತಿಭಟನಾ ನಿರತ ಮಹಿಳೆಗೆ ತಾಯಿ ಅಂತಾ ಕರೆದಿದ್ದಾರೆ. ಯಾವುದೇ ರೀತಿಯ ನಿಂದನೆ ಮಾಡಿಲ್ಲ. ಉದ್ದೇಶ ಪೂರ್ವಕವಾಗಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ ಸಚಿವರು, ರೈತರ 36 ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಪಡೆದರು. ಇತ್ತ ರೈತರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ಬಂದು ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews