ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್ ಇಂದು ಬ್ರೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಅಲ್ಲಿನ ಅವ್ಯವಸ್ಥೆ ಕಂಡು ಬ್ರೀಮ್ಸ್ ನಿರ್ದೇಶಕ ಡಾ. ಚನ್ನಣ್ಣನವರ ಅವರನ್ನು ತರಾಟೆಗೆ ತಗೆದುಕೊಂಡಿದ್ದಾರೆ.
ಆಸ್ಪತ್ರೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಹಾಗೂ ಅವ್ಯವಸ್ಥಿತೆಯಿಂದ ರೋಗಿಗಳು ಪರದಾಡುವಂತಾಗಿದೆ ಎಂದು ಸ್ಥಳೀಯರು ಸಚಿವರಿಗೆ ದೂರು ನೀಡಿದ್ದರು. ಹೀಗಾಗಿ ಇಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವಪ್ಪ ನೇತೃತ್ವದಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಬೆಡ್‍ಗಳ ಮೇಲೆ ದೂಳು ಇರುವುದು, ಸ್ವಚ್ಛತೆ ಇಲ್ಲದಿರುವುದು, ಬೆಳಕಿನ ಅಭಾವ ಕಂಡು ಅಧಿಕಾರಿಗಳ ವಿರುದ್ಧ ಗರಂ ಆದರು.
Advertisement
Advertisement
ನಿಮ್ಮ ಮನೆಯ ಕೆಲಸಗಾರರು ಸರಿಯಾಗಿ ಕೆಲಸ ಮಾಡದಿದ್ದರೆ ನೀವು ಸುಮ್ಮನೆ ಇರುತ್ತಿರಾ? ಆಸ್ಪತ್ರೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ನಿಮಗೇನು ತೊಂದರೆ? ನಿಮ್ಮ ನಿಷ್ಕಾಳಜಿ ರೋಗಿಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ನಿಮ್ಮ ಸಮಸ್ಯೆ ಏನು ಅಂತಾ ಹೇಳಿ ಎಂದು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.
Advertisement
ಸ್ವಚ್ಛತೆ ಕಾಪಾಡಲು ಹಾಗೂ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ನಿಮಗೆ ಏನು ಸವಲತ್ತು ಬೇಕು ಹೇಳಿ, ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ನಿಮಗೆ ಅನುಕೂಲ ಮಾಡಿಕೊಡುತ್ತೇನೆ. ಸಹಾಯ ಮಾಡಲಾಗುತ್ತದೆ ಅಂತಾ ನಾನೇ ಪತ್ರದಲ್ಲಿ ಬರೆದುಕೊಡಬೇಕೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv