Connect with us

Bengaluru City

50 ಲಕ್ಷ ರೈತರಿಗೆ 1 ಸಾವಿರ ಕೋಟಿ ಹಣ ಬಿಡುಗಡೆ: ಬಿ.ಸಿ.ಪಾಟೀಲ್

Published

on

– ಬೆಳೆ ವಿಮೆ ಹಣ ಆ.18 ರಿಂದ ರೈತರ ಖಾತೆಗೆ ಜಮೆ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 1 ಸಾವಿರ ಕೋಟಿ ಹಣವನ್ನು 50 ಲಕ್ಷ ರೈತರಿಗೆ ಬಿಡುಗಡೆ ಮಾಡಿರುವುದಾಗಿ ಸಚಿವ ಬಿ.ಸಿ.ಪಾಟೀಲ್ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಕಳೆದ ಶನಿವಾರ ಬೆಳಗ್ಗೆ 7 ಗಂಟೆಯಿಂದ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ. 2019-20ನೇ ಸಾಲಿನ ಬೆಳೆ ವಿಮೆ ಹಣ ಮಂಗಳವಾರದಿಂದ ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ. ವಿಮೆಗಾಗಿ ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವುದಾಗಲಿ, ಚಿಂತಿಸುವ ಅವಶ್ಯಕತೆಯಿಲ್ಲ. ಸರ್ಕಾರ ಮತ್ತು ಇಲಾಖೆ ಎಂದಿಗೂ ರೈತರೊಂದಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಸಚಿವರು ಹೇಳಿದ್ದಾರೆ.

ಇಲಾಖೆಯ ವೃಂದ ಮತ್ತು ನೇಮಕಾತಿ ಪ್ರಕ್ರಿಯೆಗೆ ನಿಯಮಗಳ ಕರಡು ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಶೀಘ್ರವೇ ‘ರೈತಮಿತ್ರ’ ರ ನೇಮಕಾತಿ ಮಾಡಿಕೊಳ್ಳಲಾಗುತ್ತೆ. ಅಲ್ಲದೇ ರಾಜ್ಯದಲ್ಲಿ ಯೂರಿಯಾ ಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ಕಳೆದ ಸಾಲಿಗಿಂತ ಈ ವರ್ಷ ಶೇ.25 ರಷ್ಟು ಹೆಚ್ಚಿನದಾಗಿ ಬಿತ್ತನೆಯಾಗಿದೆ. ಆದ್ದರಿಂದ ಈ ವರ್ಷ 65 ಸಾವಿರ ಮೆಟ್ರಿಕ್ ಟನ್ ಯೂರಿಯಾ ಹೆಚ್ಚಿನದಾಗಿ ಪೂರೈಕೆಯಾಗುತ್ತಿದೆ. ಈ ವಾರ 37 ಸಾವಿರ ಟನ್ ಯೂರಿಯಾ ಸರಬರಾಜು ಆಗುತ್ತಿದೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು.

ಯೂರಿಯಾವನ್ನು ರೈತರು ಭೂಮಿಗೆ ಎಷ್ಟು ಅಗತ್ಯವೋ ಅಷ್ಟು ಪ್ರಮಾಣದಲ್ಲಿ ಮಾತ್ರ ಬಳಸಬೇಕು. ಯಾವುದೇ ರಾಸಾಯನಿಕ ಔಷಧಿಯಾಗಲಿ, ರಸಗೊಬ್ಬರವನ್ನಾಗಲಿ ಅಗತ್ಯಕ್ಕೆ, ಅವಶ್ಯಕತೆಗೆ ಮೀರಿ ಬಳಸಬಾರದು. ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ಬಳಸಿದ್ದಲ್ಲಿ ಭೂಮಿಯ ಫಲವತ್ತತೆ ಕ್ಷೀಣಿಸುವ ಸಾಧ್ಯತೆಯೂ ಇದೆ. ಹೀಗಾಗಿ ರೋಗಕ್ಕೆ ಎಷ್ಟು ಮದ್ದಿನ ಅಗತ್ಯತೆಯಿದೆಯೋ ಅಷ್ಟನ್ನು ಮಾತ್ರ ಬಳಸಬೇಕು. ಯಾವುದೇ ರೋಗಕ್ಕಾಗಲಿ ಅಗತ್ಯಕ್ಕಿಂತ ಹೆಚ್ಚಿನ ಔಷಧಿ ಸೇವಿಸಿದ್ದಲ್ಲಿ ಅದು ವಿಷವಾಗಿ ಪರಿಣಮಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *