ಹಾವೇರಿ: ರಾಜಕೀಯ ಲಾಭಕ್ಕಾಗಿ ಪುಲ್ವಾಮಾ ದಾಳಿ ಎಂಬ ರಾಹುಲ್ ಗಾಂಧಿ ಹೇಳಿಕೆ ವಿಚಾರ ಅದು ಅವರ ಬಾಲಿಶತನದ ಹೇಳಿಕೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಕಿಡಿ ಕಾರಿದ್ದಾರೆ.
ಹಾವೇರಿ ಜಿಲ್ಲೆ ರಟ್ಟಿಹಳ್ಳಿಯ ಬತ್ತಿಕೊಪ್ಪ ಕ್ರಾಸ್ ನಲ್ಲಿ ಅವರು ಮಾತನಾಡಿದ ಅವರು, ಸೈನಿಕರ ಸಮಾಧಿ ಮೇಲೆ ರಾಜಕೀಯ ಮಾಡೋ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ. ರಾಹುಲ್ ಗಾಂಧಿಯವರು ಅಪ್ರಬುದ್ಧ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ರೈತರಿಗೆ ಬರಬೇಕಾದ ಕೃಷಿ ಸಮ್ಮಾನ್ ಹಣ ಆದಷ್ಟು ಬೇಗ ರೈತರಿಗೆ ಜಮಾ ಮಾಡಿಸುತ್ತೇನೆ. ಈ ಸಂಬಂಧ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದರು. 40 ವರ್ಷಗಳ ನಂತರ ತಾಲೂಕಿಗೆ ಮಂತ್ರಿ ಭಾಗ್ಯ ಸಿಕ್ಕಿದೆ. ರೈತನ ಮಗನಾಗಿ ಕೃಷಿ ಸಚಿವನಾಗಿ ಬಂದಿದ್ದಕ್ಕೆ ಸಂತೋಷವಾಗುತ್ತಿದೆ.
Advertisement
ಅರಣ್ಯ ಇಲಾಖೆಯನ್ನ ಯಾರೂ ಬಿಡೋದಿಲ್ಲ. ಸಿಎಂಗೆ ಪ್ರಾಣಿಗಳಿದ್ದಲ್ಲಿಗೆ ಬೇಡ, ಜನರಿದ್ದಲ್ಲಿಗೆ ಕಳಿಸಿ ಅಂದೆ. ಸಿಎಂ ಕೃಷಿ ಖಾತೆ ಅಂದು ಕೃಷಿ ಖಾತೆ ಕೊಟ್ಟಿದ್ದಾರೆ. ಉತ್ತಮ ಕೆಲಸ ಮಾಡುತ್ತೆನೆ ಎಂದರು. ಇದಕ್ಕೂ ಮೊದಲು ಸಚಿವರಾದ ಬಳಿಕ ಮೊದಲ ಬಾರಿಗೆ ಆಗಮಿಸಿದ ಬಿ.ಸಿ ಪಾಟೀಲರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.
Advertisement
ರಾಹುಲ್ ಗಾಂಧಿ ಹೇಳಿದ್ದೇನು?
ಕರಾಳ ದಿನದ ಬಗ್ಗೆ ಟ್ವೀಟ್ ಮಾಡಿದ ರಾಹುಲ್ ಗಾಂಧಿ, ನಾವು ಇಂದು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರಯೋಧರಿಗೆ ನಮನ ಸಲ್ಲಿಸುತ್ತಿದ್ದೇವೆ. ಈ ಬಗ್ಗೆ ಕೆಲ ಪ್ರಶ್ನೆಗಳನ್ನು ಕೇಳೋಣ, ಈ ದಾಳಿಯಿಂದ ಯಾರಿಗೆ ಹೆಚ್ಚು ಲಾಭ ಆಯ್ತು? ದಾಳಿಯ ಕುರಿತು ನಡೆಸಿದ ತನಿಖೆಯ ಸತ್ಯಾಂಶ ಏನು? ದಾಳಿಗೆ ಅವಕಾಶ ನೀಡಿದ ಭದ್ರತಾ ವೈಫಲ್ಯಕ್ಕೆ ಬಿಜೆಪಿ ಸರ್ಕಾರದಲ್ಲಿ ಹೊಣೆಗಾರರು ಯಾರು ಎಂದು ಬರೆದು ಪುಲ್ವಾಮಾ ಹುತಾತ್ಮರನ್ನು ಇರಿಸಿದ್ದ ಫೋಟೋವನ್ನು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.