– ಶಾಶ್ವತ ಪರಿಹಾರ ಕಲ್ಪಿಸಲು 10 ಎಕರೆ ಜಾಗ ಗುರುತು: ಸಚಿವರಿಂದ ಭರವಸೆ
ಮಡಿಕೇರಿ: ಮಳೆ ಅರ್ಭಟದಿಂದ ಕೊಡಗು ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ, ಮಳೆಯ ಅವಾಂತರಗಳು ಮುಂದುರೆದಿದೆ. ಈ ಹಿನ್ನೆಲೆಯಲ್ಲಿ ʻಪಬ್ಲಿಕ್ ಟಿವಿʼ (Public TV) ಕಾವೇರಿ ಪ್ರತಾಪಕ್ಕೆ ನಲುಗಿದ ಪ್ರವಾಹವ ಸಂತ್ರಸ್ತರ ಬಗ್ಗೆ ವರದಿ ಮಾಡಿದ ಬೆನ್ನಲ್ಲೇ ಕೊಡಗು ಉಸ್ತುವಾರಿ ಸಚಿವ ಬೋಸರಾಜು (NS Boseraju) ಸ್ಥಳಕ್ಕೆ ತೆರಳಿ ಜನರ ಸಮಸ್ಯೆಯನ್ನು ಅಲಿಸಿದ್ದಾರೆ.
Advertisement
ಹೌದು. ಕಾವೇರಿ ನದಿ (Cauvery River) ಪಾತ್ರದ ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಬೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ಅವರು ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು. ಇದನ್ನೂ ಓದಿ: ಲಾಂಗ್ ಡ್ರೈವ್‌ಗೆ ಅಂತ ಕರೆದೊಯ್ದು ಚಲಿಸುತ್ತಿದ್ದ ಕಾರಿನಲ್ಲೇ ಬಾಲಕಿ ಮೇಲೆ ಅತ್ಯಾಚಾರ; ಇಬ್ಬರು ಅರೆಸ್ಟ್
Advertisement
Advertisement
ಪ್ರತಿ ಬಾರಿ ಪ್ರವಾಹದ ಭೀತಿ ಎದುರಿಸುತ್ತಿದ್ದು, ಬದುಕು ದುಸ್ತರವಾಗಿದೆ. ಆದ್ದರಿಂದ ನಮ್ಮನ್ನು ಸ್ಥಳಾಂತರ ಮಾಡಿ, ವಸತಿ ಕಲ್ಪಿಸುವಂತೆ ಕೋರಿದರು. ಕರಡಿಗೋಡು ನದಿ ದಡದಲ್ಲಿ ಸುಮಾರು 70ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು. ಈ ವೇಳೆ ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವರು, ಸದ್ಯದಲ್ಲೇ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
Advertisement
ಮಾಲ್ದಾರೆ ವ್ಯಾಪ್ತಿಯಲ್ಲಿ ಸಂತ್ರಸ್ತರಿಗಾಗಿ 10 ಎಕರೆ ಜಾಗ ಗುರುತು ಮಾಡಲಾಗಿದ್ದು, ಈ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. ಇದನ್ನೂ ಓದಿ: 24 ಗಂಟೆ ವಿದ್ಯುತ್ ಉಚಿತ, ಯುವಕರಿಗೆ ಉದ್ಯೋಗ ಖಚಿತ, ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. – ʻಕೇಜ್ರಿವಾಲ್ ಕಿ ಗ್ಯಾರಂಟಿʼ ಘೋಷಣೆ!
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ರಾಮಚಂದ್ರ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು. ಇದನ್ನೂ ಓದಿ: ಲೋಕಸಭಾ ಚುನಾವಣೆಗಾಗಿ ಬಿಬಿಎಂಪಿಯಲ್ಲಿ 2,000 ಕೋಟಿ ರೂ. ಟೆಂಡರ್ ಹಗರಣ – ಮಾಜಿ ಉಪಮೇಯರ್ ಹೊಸ ಬಾಂಬ್