ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election) ಹೊತ್ತಲ್ಲಿ ನಕಲಿ ವೋಟರ್ ಐಡಿ (Fake Voter ID) ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ (Byrathi Suresh) ಆಪ್ತನನ್ನು ಸಿಸಿಬಿ (CCB) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸಚಿವರ ಆಪ್ತನಾದ ಮೌನೇಶ್ ಕುಮಾರ್‌ನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಈತನ ಜೊತೆಗೆ ಶಾಮೀಲಾಗಿದ್ದ ಭಗತ್ ಹಾಗೂ ರಾಘವೇಂದ್ರ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಹಣ ಕೊಟ್ಟರೆ ನಕಲಿ ವೋಟರ್ ಐಡಿ, ಆಧಾರ್ ಕಾರ್ಡ್ ಹಾಗೂ ಡಿಎಲ್‍ನ್ನು ಮಾಡಿಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: Gaganyaan Mission- ಇಸ್ರೋ ಗಗನಯಾನ ಪರೀಕ್ಷಾರ್ಥ ಉಡಾವಣೆ ಯಶಸ್ವಿ
ಆರೋಪಿಗಳು ಯಾವುದೇ ಕ್ಷೇತ್ರದ ವೋಟರ್ ಐಡಿ ಹಾಗೂ ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದು ಕನಕನಗರದಲ್ಲಿರುವ ಎಂಎಸ್‍ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಎಂ.ಬಿ ಪಾಟೀಲ್ ಸಿಎಂ ಆಗಬೇಕಂದ್ರೆ ಜನ ಬಯಸಬೇಕು- ಸಚಿವರ ಇಂಗಿತ
Web Stories