ಗದಗ: ನೀರು ಜೀವ ಜಲವಾಗಿದ್ದು, ಅದನ್ನು ಗ್ರಾಮಸ್ಥರು ನಿಯಮಿತವಾಗಿ ಬಳಕೆ ಮಾಡಬೇಕು ಎಂದು ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ್ ಹೇಳಿದರು.
ತಾಲೂಕಿನ ನೀರಲಗಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಆಯೋಜಿಸಲಾಗಿದ್ದ, ಜಲಜೀವನ್ ಮಿಷನ್ ಕಾಮಗಾರಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನೀರು ಒದಗಿಸುವ ಉದ್ದೇಶದಿಂದ ಮನೆ ಮನೆಗೂ ಗಂಗೆ ಯೋಜನೆಯಡಿ ದೇಶದ ಪ್ರತಿ ಮನೆಗೂ ನಲ್ಲಿ ಮೂಲಕ ಶುದ್ಧ ನೀರು ಪೂರೈಸಲಾಗುತ್ತಿದೆ ಎಂದರು.
Advertisement
Advertisement
ಜಲ ಜೀವನ ಮಿಷನ್ ಯೋಜನೆಯಡಿ ನೀರಲಗಿ ಗ್ರಾಮದ ಪ್ರತಿ ಮನೆಗಳಿಗೂ ನಲ್ಲಿ ಅಳವಡಿಸುವ ಮೂಲಕ ನೀರು ಪೂರೈಕೆಗೆ ಅಂದಾಜು 30 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಗುಣಮಟ್ಟದ ಕಾಮಗಾರಿ ನಡೆಸುವ ಮೂಲಕ ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಸದ್ಭಳಕೆಗೆ ನೀಡಬೇಕು ಎಂದರು. ಇದನ್ನೂ ಓದಿ: ಗಲಾಟೆ ಮಾಡಿ ತಲೆಗೆ ಕಲ್ಲಲ್ಲಿ ಹೊಡೆದು ಹುಡುಗಿಯನ್ನು ದೂರ ಕರೆದೊಯ್ದು ರೇಪ್ ಮಾಡಿದ್ರು: ಯುವಕ
Advertisement
ಪಂಚಾಯತ್ ರಾಜ್ ಇಂಜನೀಯರಿಂಗ್ ಇಲಾಖೆಯಿಂದ 2019-20ನೇ ಸಾಲಿನ ಸಮಗ್ರ ಶಿಕ್ಷಣ ಯೋಜನೆಯಡಿ ಶಾಲಾ ಕಟ್ಟಡ ನಿರ್ಮಾಣಕ್ಕಾಗಿ ಅಂದಾಜು 33 ಲಕ್ಷ ರೂ.ಅನುದಾನವನ್ನು ಬಿಡುಗಡೆಗೊಳಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಗ್ರಾಮದಲ್ಲಿ ನಿರ್ಮಾಣಗೊಂಡ ಸರ್ಕಾರಿ ಪ್ರೌಢ ಶಾಲೆಯ ಎರಡು ಕೊಠಡಿಗಳ ಉದ್ಘಾಟನೆ ನೆರವೇರಿಸಿದರು. ಸದೃಢ ಸಮಾಜ ನಿರ್ಮಾಣಕ್ಕೆ ಮತ್ತು ವಿದ್ಯಾರ್ಥಿಯ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಣವು ಅತ್ಯಮೂಲ್ಯ ಪಾತ್ರವಹಿಸುತ್ತದೆ. ಶಿಕ್ಷಣ ಪಡೆಯಲು ಮೂಲಸೌಕರ್ಯಗಳು ಅತ್ಯವಶ್ಯಕವಾಗಿವೆ. ಪಾಲಕರು, ಶಿಕ್ಷಕರು ಮಗುವನ್ನು ಕೇವಲ ಅಂಕಗಳಿಗೆ ಮಾತ್ರ ಸೀಮಿತಗೊಳಿಸದೇ ಸಮಾಜದಲ್ಲಿ ಸಮರ್ಥವಾಗಿ ಜೀವನ ನಡೆಸಲು ಮೌಲ್ಯಧಾರಿತ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳು ಭವಿಷ್ಯತ್ತಿನಲ್ಲಿ ದೇಶದ ಆಸ್ತಿಯನ್ನಾಗಿ ರೂಪಿಸಲು ನೀವೆಲ್ಲರು ಶ್ರಮಿಸಬೇಕು ಎಂದರು. ಇದನ್ನೂ ಓದಿ: ಗುರಿ ಈಡೇರಿಸಿಕೊಳ್ಳುವ ಕಡೆಗೆ ಪ್ರಯತ್ನ ನಿರಂತರವಾಗಿರಲಿ: ಎಸ್.ಟಿ.ಸೋಮಶೇಖರ್
Advertisement
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ.ರೆಡ್ಡೆರ ಪ್ರಾಸ್ತಾವಿಕ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಜನ್ಮದಿನಾಚರಣೆಯ ಅಂಗವಾಗಿ ಸದ್ಭಾವನಾ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಅಧಿಕಾರಿಗಳು, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು, ಭೂದಾನಿಗಳು ಸೇರಿದಂತೆ ಗ್ರಾಮಸ್ಥರು ಇದ್ದರು.