ಬೆಂಗಳೂರು: ಮಾಜಿ ಸಂಸದೆ ರಮ್ಯಾ ಕಾಲು ಫ್ರ್ಯಾಕ್ಚರ್ ಆಗಿದೆ. ಹಾಗಾಗಿ ಅಂಬರೀಶ್ ಅವರ ಅಂತಿಮ ದರ್ಶನ ಪಡೆಯಲು ಬರಲಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ನಿಧನದ ಸುದ್ದಿಯನ್ನು ರಮ್ಯಾರಿಗೆ ಫೋನ್ ಮಾಡಿ ತಿಳಿಸಿದೆ. ಆಗ ಅವರು, ಅಂಕಲ್ ಕಾಲು ಫ್ರ್ಯಾಕ್ಚರ್ ಆಗಿದೆ. ಅಂತಿಮ ದರ್ಶನ ಪಡೆಯಲು ಬರೋದಕ್ಕೆ ಸಾಧ್ಯವಾಗುತ್ತಿಲ್ಲ ಅಂತ ನಾನು ಫೋನ್ ಮಾಡಿದಾಗ ತಮ್ಮ ಸಮಸ್ಯೆ ಬಗ್ಗೆ ಹೇಳಿಕೊಂಡರು. ಸದ್ಯ ರಮ್ಯಾರಿಗೆ ಒಂದು ಕಡೆಯಿಂದ ಇನ್ನೊಂದು ಕಡೆ ಚಲಿಸಲು ಸಾಧ್ಯವಾಗುತ್ತಿಲ್ಲ ಎಂದು ಡಿಕೆಶಿ ಅವರು ರಮ್ಯಾ ಗೈರಿನ ಬಗ್ಗೆ ತಿಳಿಸಿದ್ದಾರೆ.
Advertisement
Advertisement
ಅಂಬರೀಶ್ ಅಂತ್ಯ ಸಂಸ್ಕಾರದ ವೇಳೆ ರಾಜ್ಯದ ಜನ ಸಂಯಮ ತೋರಿಸಿದರು. ಪೊಲೀಸ್ ಮತ್ತು ಅಧಿಕಾರಿಗಳು ಕೆಲಸದಲ್ಲಿ ದಕ್ಷತೆ ತೋರಿಸಿದ್ದರಿಂದ ಯಾವುದೇ ಅನಾಹುತ ನಡೆದಿಲ್ಲ. ಅಂಬರೀಶ್ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋಗಲು ಸಿಎಂ ನಿರ್ಧಾರ ಕೈಗೊಂಡಿದ್ದರಿಂದಲೇ ಎಲ್ಲ ಶಾಂತವಾಗಿ ನೆರವೇರಿತು ಅಂತ ಹೇಳಿದ ಅವರು, ಅಂಬರೀಶ್ ಸ್ಮಾರಕ ವಿಚಾರವಾಗಿ ಮಾತನಾಡುವ ಅಧಿಕೃತ ವ್ಯಕ್ತಿ ನಾನಲ್ಲ ಅಂದ್ರು.
Advertisement
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಾಜಿ ಸಚಿವರಾದ ಅಂಬರೀಶ್, ಜಾಫರ್ ಷರೀಫ್ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಅವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಣೆ ಮಾಡಲಾಯಿತು ಅಂತ ತಿಳಿಸಿದ್ರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv