ಬೆಂಗಳೂರು: ವೈದ್ಯಕೀಯ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ಹುಟ್ಟೂರಿನ ಅತ್ಯಾಪ್ತ ಬೆಂಬಲಿಗರೊಂದಿಗೆ ಇಂದು ಶಬರಿಮಲೆಗೆ ಪ್ರಯಾಣ ಬೆಳೆಸಿದ್ದಾರೆ.
ಶುಕ್ರವಾರ ಕಾವೇರಿ ನದಿಗೆ ಬಾಗಿನ ಅರ್ಪಿಸಿದ ಬಳಿಕ ಡಿಕೆಶಿ ಅವರು ಮೈಸೂರಿನಲ್ಲಿ ಅಯ್ಯಪ್ಪನ ಮಾಲೆ ಧರಿಸಿ ತಡರಾತ್ರಿ ಶಬರಿಮಲೆಗೆ ಹೊರಟಿದ್ದಾರೆ. ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಹುಟ್ಟೂರು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದ ಹತ್ತಕ್ಕೂ ಹೆಚ್ಚು ಬೆಂಬಲಿಗರು ಸಚಿವರಿಗೆ ಸಾಥ್ ನೀಡಿದ್ದಾರೆ.
ಕೆಆರ್‍ಎಸ್‍ನಲ್ಲಿ ಕಾವೇರಿ ತಾಯಿಗೆ ಬಾಗಿನ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಇಂದು ಸಂಜೆ ಅಯ್ಯಪ್ಪ ಮಾಲೆ ಧರಿಸಿ ಶಬರಿಮಲ ಹೋಗಲಿದ್ದೇನೆ. ಈ ಹಿಂದೆ ಒಂದೆ ಸಾರಿ ಹೋಗಿದೆ. ಇದು ಎರಡನೇ ಬಾರಿ ಶಬರಿಮಲೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದರು.
ಬಹಳ ವರ್ಷಗಳ ಹಿಂದೆ ಮಾಲೆ ಧರಿಸಿ ಶಬರಿಮಲೆಗೆ ಹೋಗುತ್ತೇನೆ ಅಂತಾ ಹರಕೆ ಹೊತ್ತುಕೊಂಡಿದ್ದೆ. ಈಗ ಕಾಲಾವಕಾಶ ಬಂದಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದೇನೆ ಎಂದು ಪಬ್ಲಿಕ್ ಟಿವಿಗೆ ತಿಳಿಸಿದ್ದರು.