ಚಿತ್ರದುರ್ಗ: ಈ ಹಿಂದಿನ ಚುನಾವಣೆ ವೇಳೆ ಪುಲ್ವಾಮಾ (Pulwama) ಘಟನೆ ತೋರಿಸಿದ್ದರು. ಈಗ ರಾಮನ (Rama) ಫೋಟೋ ಹಿಡಿದಿದ್ದಾರೆ ಎಂದು ಸಾಂಖಿಕ ಸಚಿವ ಡಿ.ಸುಧಾಕರ್ (D Sudhakar) ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಚಿತ್ರದುರ್ಗದ ಡಿಸಿಸಿ ಬ್ಯಾಂಕ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ (Ayodhya Ram Mandir) ಉದ್ಘಾಟನೆ ಒಂದು ಸ್ಟಂಟ್. ಜನರು ದಡ್ಡರಿಲ್ಲ, ಎರಡು ಸಲ ಮೂರ್ಖರಾಗಿದ್ದೀವಿ. ಮತ್ತೆ ಮೂರನೇ ಸಲ ಮೂರ್ಖರಾಗಲ್ಲ ಆಗಲ್ಲ ಎಂಬ ಭರವಸೆಯಿದೆ ಎಂದರು.
Advertisement
ಲೋಕಸಭಾ ಚುನಾವಣೆಯ (Loksabha Election) ಹಿನ್ನೆಲೆಯಲ್ಲಿ ರಾಮಮಂದಿರ ಉದ್ಘಾಟನೆ ಎಂಬುದು ಸತ್ಯ. ರಾಮಮಂದಿರಕ್ಕೆ ನಾನು, ಶಾಸಕ ರಘುಮೂರ್ತಿ ದುಡ್ಡು ಕೊಟ್ಟಿದ್ದೇವೆ. ಹಿಂದೆಲ್ಲಾ ಇಟ್ಟಿಗೆ ಸಹ ನಾವೆಲ್ಲಾ ನೀಡಿದ್ದೇವೆ. ರಾಮ ಎಲ್ಲರಿಗೂ ದೇವರು, ಚುನಾವಣೆ ವೇಳೆ ದೇಗುಲ ಉದ್ಘಾಟನೆ ಗಿಮಿಕ್ ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ಭಾರತ ದೇಶದ ಧಾರ್ಮಿಕ ನಂಬಿಕೆ ಬಳಸಿ ಬಿಜೆಪಿಯಿಂದ (BJP) ಮತ ಗಾಳ ಹಾಕಲಾಗುತ್ತಿದೆ. ಕಳೆದ ಚುನಾವಣೆಯಲ್ಲಿ ಎಲ್ಲಿತ್ತು ರಾಮ ಮಂದಿರ?, ಸುಮ್ಮ ಸುಮ್ಮನೆ ಯಾವುದೋ ಫ್ಲೈಟ್ ತೋರಿಸಿದ್ದರು. ಪಾಪ ಜನ ದೇಶ ಕಾಪಾಡುತ್ತಾರೆಂದು ನಂಬಿದರು. ಪುಲ್ವಾಮಾ ಘಟನೆಯಲ್ಲಿ ಎಷ್ಟು ಜನರು ಸತ್ತರು?, ಪುಲ್ವಾಮಾ ಘಟನೆ ಕ್ರಿಯೇಟೆಡ್ ಎಂದು ಪೈಲೆಟ್ ಹೇಳಿಲ್ವಾ?, ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಆಗಿದೆ, ಸೆಕ್ಯುಲರ್ ತತ್ವ ಎಲ್ಲಿ ಹೋಯಿತು ಎಂದು ಪ್ರಶ್ನಿಸುವ ಮೂಲಕ ಹೆಚ್‌ಡಿಕೆಗೆ ಸುಧಾಕರ್ ಟಾಂಗ್ ನೀಡಿದರು.
Advertisement
ಇದೇ ವೇಳೆ ಬಿಜೆಪಿ ಆಡಳಿತಲ್ಲಿ ಭ್ರಷ್ಟಾಚಾರ ಎಂದು ಶಾಸಕ ಯತ್ನಾಳ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಶಾಸಕ ಯತ್ನಾಳ್ ಎಲ್ಲಿವರೆಗೆ ನೋಡಿಕೊಂಡಿರುತ್ತಾರೆ. 40% ಸರ್ಕಾರ ಎಂದೇ ಕುಖ್ಯಾತಿ ಗಳಿಸಿದ್ದು ಸತ್ಯ. ಬೆಲೆ ಏರಿಕೆ, ಭ್ರಷ್ಟಾಚಾರ ನೋಡಿಯೇ ಜನ ಕಾಂಗ್ರೆಸ್ ಕೈ ಹಿಡಿದಿದ್ದಾರೆ ಎಂದರು. ಇದನ್ನೂ ಓದಿ: ಅಯೋಧ್ಯೆಯನ್ನು ಮತ್ತೆ ಬೆಳಕಿಗೆ ತರಲು ಮೋದಿಯಿಂದ ಮಾತ್ರ ಸಾಧ್ಯವಾಯ್ತು: ಮಾರಿಷಸ್ ಸಂಸದ
ಶಾಲೆಯಲ್ಲಿ ಮಕ್ಕಳಿಂದ ಶೌಚಗುಂಡಿ ಕ್ಲೀನ್ ವಿಚಾರ ಸರ್ಕಾರದ ಬೇಜವಬ್ದಾರಿಯಿಂದ ಪ್ರಕರಣ ಎಂದ ಮಾಜಿ ಸಿಎಂ ಹೆಚ್‌ಡಿಕೆಗೆ ತಿರುಗೇಟು ನೀಡಿದರು. ನಾವು ಸಹ ಶಾಲಾ ವಿದ್ಯಾರ್ಥಿ ಆಗಿದ್ದಾಗ ಕಸ ಗುಡಿಸಿದ್ದೇವೆ. ಆದರೆ ಮಕ್ಕಳಿಂದ ಶೌಚಗುಂಡಿ ಕ್ಲೀನ್ ಮಾಡಿಸುವುದು ಸರಿಯಲ್ಲ. ಮಕ್ಕಳಿಂದ ಶೌಚಗುಂಡಿ ಕ್ಲೀನ್ ವಿಚಾರ ತಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.