ಮಂಡ್ಯ: ಉಗ್ರನ ಆತ್ಮಾಹುತಿ ದಾಳಿಗೆ ಮಂಡ್ಯದ ಗಂಡು 33 ವರ್ಷದ ಗುರು ಬಲಿಯಾಗಿದ್ದಾರೆ. ಈ ಹೀನ ಕೃತ್ಯವನ್ನು ರಾಜ್ಯ ಹಾಗೂ ಇಡೀ ದೇಶವೇ ಖಂಡಿಸುತ್ತಿದ್ದು, ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದೆ. ಆದ್ರೆ ರಾಜ್ಯದ ಸಾರಿಗೆ ಸಚಿವರು ಮಾತ್ರ ಫೋನಿನಲ್ಲಿ ಮೃತ ಯೋಧ ಗುರು ತಂದೆಯ ಜೊತೆ ಮಾತನಾಡುವ ಮೂಲಕ ಸಾಂತ್ವಾನ ಹೇಳಿದ್ದಾರೆ.
ಹೌದು. ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಡಿಸಿ ತಮ್ಮಣ್ಣ ಅವರು ಮಗನ ಕಳೆದುಕೊಂಡು ದುಃಖದಲ್ಲಿರುವ ಹುತಾತ್ಮ ಯೋಧ ಗುರು ತಂದೆಯ ಜೊತೆ ಫೋನಿನಲ್ಲಿ ಮಾತನಾಡಿದ್ದಾರೆ. ಈ ವೇಳೆ ಹೊನ್ನಯ್ಯ ಅವರು,”ನನ್ನ ಮಗ ಹೊರಟು ಹೋದ್ನಲ್ಲ ಸಾರ್” ಎಂದು ಮಗನನ್ನು ನೆನಪು ಮಾಡಿಕೊಂಡು ಕಣ್ಣೀರು ಹಾಕಿದ್ದಾರೆ. ಸಚಿವರ ಈ ನಡೆಗೆ ಸ್ಥಳೀಯರು ಕಿಡಿಕಾರಿದ್ದಾರೆ. ಇದನ್ನೂ ಓದಿ: ನಮ್ಮವರನ್ನು ಹೇಗೆ ಬ್ಲಾಸ್ಟ್ ಮಾಡಿದ್ರೋ ಹಾಗೆಯೇ ಅವ್ರನ್ನು ಕೊಂದು ಬಿಡಿ ಪ್ಲೀಸ್ – ಗುರು ಪತ್ನಿ ಮನವಿ
Advertisement
Advertisement
ನಿನ್ನೆಯಿಂದ ಮದ್ದೂರು ತಾಲೂಕಿನ ಗುರು ನಿವಾಸಲ್ಲಿ ನೀರವ ಮೌನ ಆವರಿಸಿದೆ. ಅಲ್ಲದೆ ಪತ್ನಿ, ಹೆತ್ತವರು, ಗೆಳೆಯರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆದ್ರೆ ಸ್ಥಳಕ್ಕೆ ಯಾವ ರಾಜಕೀಯ ನಾಯಕರು ಬಂದಿಲ್ಲ. ಹೀಗಾಗಿ ರಾಜ್ಯ ರಾಜಕೀಯ ನಾಯಕರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಇಂದು ದೂರವಾಣಿಯಲ್ಲಿ ಯೋಧ ಕುಟುಂಬಸ್ಥರೂಂದಿಗೆ ಪೋನ್‍ನಲ್ಲಿ ಮಾತನಾಡಿ ಸಾಂತ್ವಾನ ಹೇಳಿದ್ದಾರೆ.
Advertisement
ಕೃತ್ಯ ನಡೆದಿದ್ದು ಹೇಗೆ?
ಗುರುವಾರ ಬೆಳಗ್ಗೆ 3.30ಕ್ಕೆ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್‍ಪಿಎಫ್ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರನ್ನು ಉಗ್ರನೊಬ್ಬ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 47 ಮಂದಿ ಸೈನಿಕರು ವೀರಮರಣವನ್ನು ಅಪ್ಪಿದ್ದಾರೆ. ಇದನ್ನೂ ಓದಿ: ಹುತಾತ್ಮ ಯೋಧನ ಕುಟುಂಬಕ್ಕೆ ಮಧ್ಯಪ್ರದೇಶ ಸರ್ಕಾರದಿಂದ 1 ಕೋಟಿ ರೂ. ಪರಿಹಾರ ಘೋಷಣೆ
Advertisement
ಸ್ಫೋಟದ ತೀವ್ರತೆ ಎಷ್ಟು ಇತ್ತು ಎಂದರೆ ಸೈನಿಕರ ದೇಹದ ಭಾಗಗಳು ಹೈವೇಯ 100 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಸ್ಫೋಟಕಗೊಂಡ ಬಳಿಕ ಉಳಿದ ಬಸ್ಸುಗಳು ನಿಂತ ಮೇಲೆ ಅವುಗಳ ಮೇಲೂ ಉಗ್ರರು ದಾಳಿ ನಡೆಸಿದ್ದಾರೆ. ಆತ್ಮಾಹುತಿ ದಾಳಿಕೋರ ಬಸ್ಸಿಗೆ ಕಾರನ್ನು ಡಿಕ್ಕಿ ಹೊಡೆದ ಬಳಿಕ ಉಳಿದ ಬಸ್ಸು ನಿಂತ ಕೂಡಲೇ ಉಗ್ರರು ಗುಂಡಿನ ದಾಳಿ ಮಾಡಿದ್ದಾರೆ. ಹೀಗಾಗಿ ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಉಗ್ರರ ಈ ದಾಳಿಗೆ ಸಾಕ್ಷ್ಯ ಎಂಬಂತೆ ಬಸ್ಸಿನ ಹಿಂಭಾಗದಲ್ಲಿ ಬುಲೆಟ್ ಗುರುತು ಬಿದ್ದಿದೆ. ವಿಪರೀತ ಮಂಜು ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಶ್ರೀನಗರ ಹೆದ್ದಾರಿ ಕಳೆದ ಎರಡು ದಿನಗಳಿಂದ ಮುಚ್ಚಲ್ಪಟ್ಟಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv