ಬೆಂಗಳೂರು: 108 ಅಂಬುಲೆನ್ಸ್ (Ambulance) ಸಿಬ್ಬಂದಿ ಬಾಕಿ ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಮುಷ್ಕರ ನಡೆಸದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಆರೋಗ್ಯ ವಾಹಿನಿ ಸಿಬ್ಬಂದಿಗೆ ಕರೆ ನೀಡಿದ್ದಾರೆ.
ಸಚಿವರ ಸೂಚನೆಯ ಮೇರೆಗೆ 108 ಅಂಬುಲೆನ್ಸ್ ಸಿಬ್ಬಂದಿ (Ambulance Staff) ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಬಾಕಿ ವೇತನದ ಮೊದಲ ಕಂತಿನ 14 ಕೋಟಿ ರೂ. ಬಿಡುಗಡೆಗೊಳಿಸಿದ್ದಾರೆ. ಉಳಿದ ಕಂತುಗಳನ್ನು ಶೀಘ್ರದಲ್ಲಿ ಪಾವತಿಸುವ ಭರವಸೆ ನೀಡಿದರು. ಇದನ್ನೂ ಓದಿ: ಅಮರನಾಥ ಯಾತ್ರೆ: ಗುಡ್ಡ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರೋ 80 ಮಂದಿ ಕನ್ನಡಿಗರು
Advertisement
Advertisement
ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಸೇರಿದಂತೆ 108 ಅಂಬುಲೆನ್ಸ್ ಸಿಬ್ಬಂದಿ ಜೊತೆ ಸೋಮವಾರ ಸಭೆ ನಡೆಸಲಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೇತನ ಬಾಕಿ ಇರುವ ಸಮಸ್ಯೆಯನ್ನ ಪರಿಹರಿಸುವುದಾಗಿ ಹೇಳಿದ್ದಾರೆ. ಸಿಬ್ಬಂದಿ ಸಮಸ್ಯೆಗಳನ್ನ ಆಲಿಸಲಿರುವ ಸಚಿವರು, ಅವರ ಬೇಡಿಕೆಗಳ ಬಗ್ಗೆಯೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದರು.
Advertisement
ಹಿಂದಿನ ಸರ್ಕಾರದ ಅವಧಿಯಲ್ಲಿ 108 ಅಂಬುಲೆನ್ಸ್ ಗುತ್ತಿಗೆಯಲ್ಲಿ ಆದ ಎಡವಟ್ಟುಗಳಿಂದ ವೇತನ ಪಾವತಿಯಲ್ಲಿ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಈಗಾಗಲೇ ಸಿಎಂ ಜೊತೆ ಚರ್ಚಿಸಿದ್ದು, ಸಿಬ್ಬಂದಿಗೆ ವೇತನದ ಸಮಸ್ಯೆಯಾಗದಂತೆ ಕ್ರಮ ವಹಿಸುವ ಬಗ್ಗೆ ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದ ಆರೋಗ್ಯ ಸಚಿವ ಗುಂಡೂರಾವ್, ಬಾಕಿ ವೇತನ ಪಾವತಿಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದರು. ಇದನ್ನೂ ಓದಿ: ಹೊರಗುತ್ತಿಗೆ ನೌಕರಿಯಲ್ಲೂ ಮೀಸಲಾತಿ ಜಾರಿಗೆ ಚಿಂತನೆ: ಸಿದ್ದರಾಮಯ್ಯ ಘೋಷಣೆ
Advertisement
40 ಕೋಟಿ ವೇತನ ಪಾವತಿ ಬಾಕಿಯಿದ್ದು, ಇಂದು ಮೊದಲ ಕಂತು 14 ಕೋಟಿ ಬಿಡುಗಡೆಗೊಳಿಸಲಾಗಿದೆ. ಸೋಮವಾರ ಸಂಜೆಯೊಳಗೆ ಉಳಿದ ಬಾಕಿ ವೇತನ ಪಾವತಿಗೆ ಕ್ರಮ ವಹಿಸುವುದಾಗಿ ಆಯುಕ್ತ ರಂದೀಪ್ ಸಿಬ್ಬಂದಿಗೆ ಭರವಸೆ ನೀಡಿದ್ದಾರೆ.
ಆರೋಗ್ಯ ಸಚಿವರು ಸಿಬ್ಬಂದಿ ಜೊತೆ ಸಭೆ ನಡೆಸುವ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ಮುಷ್ಕರ ನಡೆಸದಿರಲು 108 ಅಂಬುಲೆನ್ಸ್ ಸಿಬ್ಬಂದಿ ನಿರ್ಧರಿಸಿದ್ದಾರೆ. 15% ರಷ್ಟು ವೇತನ ಹೆಚ್ಚಳಕ್ಕೆ ಸಿಬ್ಬಂದಿ ಬೇಡಿಕೆಯಿಟ್ಟಿದ್ದು, ಈ ಬಗ್ಗೆಯೂ ಆರೋಗ್ಯ ಸಚಿವರು ಚರ್ಚಿಸಲಿದ್ದಾರೆ ಎಂದು ಆರೋಗ್ಯ ಆಯುಕ್ತ ರಂದೀಪ್ ಸಿಬ್ಬಂದಿಗೆ ತಿಳಿಸಿದ್ದಾರೆ.
Web Stories