ಬೆಂಗಳೂರು: ಚುನಾವಣೆಗೆ ಮುಂಚೆ ಮುಸ್ಲಿಮರನ್ನು ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು (HD Kumaraswamy) ಈಗ ಮುಸ್ಲಿಂ ದ್ವೇಷಿಯಾಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ವಾಗ್ದಾಳಿ ನಡೆಸಿದ್ದಾರೆ.
1
ದೇಶದ ಸಂಪತ್ತಿನಲ್ಲಿ ಮುಸ್ಲಿಂರಿಗೂ ಪಾಲಿದೆ ಎಂಬ ಸಿದ್ದರಾಮಯ್ಯರ ಹೇಳಿಕೆಯಲ್ಲಿ ತಪ್ಪೇನಿದೆ?
ಸಿದ್ದರಾಮಯ್ಯ ಏನಾದರೂ ದೇಶದ ಸಂಪತ್ತೆಲ್ಲಾ ಮುಸ್ಲಿಂರಿಗೇ ಸೇರಬೇಕು ಎಂದಿದ್ದಾರಾ?
ಹಾಗೇನಾದರೂ ಹೇಳಿಕೆ ಕೊಟ್ಟಿದಿದ್ದರೆ JDS-BJPಯವರು ವಿರೋಧಿಸುವುದರಲ್ಲಿ ಅರ್ಥವಿರುತಿತ್ತು.
JDS-BJPಯವರ ಪ್ರಕಾರ ಮುಸ್ಲಿಂರಿಗೆ ಈ ದೇಶದ ಸಂಪತ್ತಿನಲ್ಲಿ…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) December 6, 2023
Advertisement
ಈ ಸಂಬಂಧ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, ಧರ್ಮದ ನಡುವೆ ಬೆಂಕಿ ಹಚ್ಚಿ ದೇಶ ಒಡೆಯುವ ಬಿಜೆಪಿಯವರ ಧರ್ಮ ರೋಗ ನಿಮಗೂ ಅಂಟಿದ್ದಕ್ಕೆ ವಿಷಾದವಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಿಎಂ ಐಸಿಸ್ ಉಗ್ರನ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ: ಯತ್ನಾಳ್
Advertisement
Advertisement
ಎಕ್ಸ್ ನಲ್ಲೇನಿದೆ..?: ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೂ ಪಾಲಿದೆ ಎಂಬ ಸಿದ್ದರಾಮಯ್ಯರ (Siddaramaiah) ಹೇಳಿಕೆಯಲ್ಲಿ ತಪ್ಪೇನಿದೆ?. ಸಿದ್ದರಾಮಯ್ಯ ಏನಾದರೂ ದೇಶದ ಸಂಪತ್ತೆಲ್ಲಾ ಮುಸ್ಲಿಮರಿಗೇ ಸೇರಬೇಕು ಎಂದಿದ್ದಾರಾ?. ಹಾಗೇನಾದರೂ ಹೇಳಿಕೆ ಕೊಟ್ಟಿದಿದ್ದರೆ ಜೆಡಿಎಸ್- ಬಿಜೆಪಿಯವರು (JDS-BJP) ವಿರೋಧಿಸುವುದರಲ್ಲಿ ಅರ್ಥವಿರುತಿತ್ತು. ಈ ದೇಶದಲ್ಲಿರುವ ಮುಸ್ಲಿಮರು ಭಾರತೀಯರೇ ಹೊರತು ಅನ್ಯದೇಶದವರಲ್ಲ ಎಂದಿದ್ದಾರೆ.
Advertisement
2
ಈ ದೇಶದಲ್ಲಿರುವ ಮುಸ್ಲಿಂರು ಭಾರತೀಯರೇ ಹೊರತು ಅನ್ಯದೇಶದವರಲ್ಲ.
ನಮ್ಮ ಸಂವಿಧಾನ ಮುಸ್ಲಿಂರಿಗೂ ಸಮಾನ ಹಕ್ಕು ಕಲ್ಪಿಸಿದೆ.
ಹೀಗಾಗಿ ದೇಶದ ಸಂಪತ್ತಿನಲ್ಲಿ ಮುಸ್ಲಿಂರಿಗೂ ಪಾಲಿದೆ ಎಂಬ ಸಿದ್ದಾರಾಮಯ್ಯರ ಹೇಳಿಕೆಯಲ್ಲಿ ಯಾವ ತಪ್ಪೂ ಇಲ್ಲ.
ಈಗ ಸಿದ್ದರಾಮಯ್ಯರ ಹೇಳಿಕೆಗೆ ವಿವಾದದ ಸ್ವರೂಪ ನೀಡುತ್ತಿರುವ ಕುಮಾರಸ್ವಾಮಿಯವರಿಗೆ ಮುಸ್ಲಿಂರು…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) December 6, 2023
ನಮ್ಮ ಸಂವಿಧಾನ ಮುಸ್ಲಿಂರಿಗೂ ಸಮಾನ ಹಕ್ಕು ಕಲ್ಪಿಸಿದೆ. ಹೀಗಾಗಿ ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೂ ಪಾಲಿದೆ ಎಂಬ ಸಿದ್ದಾರಾಮಯ್ಯರ ಹೇಳಿಕೆಯಲ್ಲಿ ಯಾವ ತಪ್ಪೂ ಇಲ್ಲ. ಈಗ ಸಿದ್ದರಾಮಯ್ಯರ ಹೇಳಿಕೆಗೆ ವಿವಾದದ ಸ್ವರೂಪ ನೀಡುತ್ತಿರುವ ಕುಮಾರಸ್ವಾಮಿಯವರಿಗೆ ಮುಸ್ಲಿಮರು ಭಾರತೀಯರು ಅಲ್ಲ ಎನ್ನುವ ಧೈರ್ಯವಿದೆಯೇ?. ಚುನಾವಣೆಗೆ ಮುಂಚೆ ಮುಸ್ಲಿಮರನ್ನು ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದ ಹೆಚ್‍ಡಿಕೆಯವರು ಈಗ ಮುಸ್ಲಿಂ ದ್ವೇಷಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
3
ಚುನಾವಣೆಗೆ ಮುಂಚೆ ಮುಸ್ಲಿಂರನ್ನು ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದ HDKಯವರು ಈಗ ಮುಸ್ಲಿಂ ದ್ವೇಷಿಯಾಗಿದ್ದಾರೆ.
HDKಯವರ ಈ ಮುಸ್ಲಿಂ ದ್ವೇಷಕ್ಕೆ BJP ಜೊತೆಗಿನ ಸಹವಾಸ ದೋಷವೇ ಕಾರಣ.
HDK ಯವರೆ, ಈ ದೇಶದಲ್ಲಿ ಹಿಂದೂ-ಮುಸಲ್ಮಾನರೆಲ್ಲಾ ಒಂದೆ.
ಧರ್ಮದ ನಡುವೆ ಬೆಂಕಿ ಹಚ್ಚಿ ದೇಶ ಒಡೆಯುವ BJPಯವರ ಧರ್ಮ ರೋಗ ನಿಮಗೂ…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) December 6, 2023
ಹೆಚ್‍ಡಿಕೆಯವರ ಈ ಮುಸ್ಲಿಂ ದ್ವೇಷಕ್ಕೆ ಬಿಜೆಪಿ ಜೊತೆಗಿನ ಸಹವಾಸ ದೋಷವೇ ಕಾರಣ. ಹೆಚ್‍ಡಿಕೆಯವರೆ, ಈ ದೇಶದಲ್ಲಿ ಹಿಂದೂ-ಮುಸಲ್ಮಾನರೆಲ್ಲಾ ಒಂದೇ. ಧರ್ಮದ ನಡುವೆ ಬೆಂಕಿ ಹಚ್ಚಿ ದೇಶ ಒಡೆಯುವ ಬಿಜೆಪಿಯವರ ಧರ್ಮ ರೋಗ ನಿಮಗೂ ಅಂಟಿದ್ದಕ್ಕೆ ವಿಷಾದವಾಗುತ್ತಿದೆ ಎಂದಿದ್ದಾರೆ.