ಬೆಂಗಳೂರು: ಹಿಂದೆ ಏನಾಯಿತು ಎಂಬುದು ಮುಖ್ಯ ಅಲ್ಲ, ಇವತ್ತು ಏನಾಯಿತು ಎಂಬುದು ಮುಖ್ಯ. ನೀರಿನ ವಿಚಾರ ಬಂದಾಗ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡಿದ್ದೇವೆ. ಈಗಲೂ ಒಗ್ಗಟ್ಟಾಗಿ ಇರಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿದರು.
ಕಾವೇರಿ ಜಲವಿವಾದ (Cauvery Water Disputes) ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕಾರ ಕೆಲವು ತೀರ್ಮಾನ ತೆಗೆದುಕೊಂಡಿತ್ತು. ಈ ಬೆಳವಣಿಗೆ ನಂತರ ಸಿಎಂ, ಡಿಸಿಎಂ ಕುಳಿತು ಒಂದು ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯದ ಪರವಾಗಿ ಏನೇನು ತೀರ್ಮಾನ ತೆಗೆದುಕೊಳ್ಳಬೇಕು. ಅದನ್ನು ನಮ್ಮ ಸರ್ಕಾರ ಖಂಡಿತಾ ಮಾಡುತ್ತದೆ. ಇದರಲ್ಲಿ ಯಾವುದೇ ಅನುಮಾನ ಪಡುವಂತದ್ದು ಇಲ್ಲ ಎಂದರು.
Advertisement
Advertisement
ಒಂದೊಂದು ಸನ್ನಿವೇಶದಲ್ಲಿ ಒಂದೊಂದು ಬೇಡಿಕೆ ಬರುತ್ತಿರುತ್ತವೆ. ಮಳೆ ಕಡಿಮೆಯಾದಾಗ ಬೇಡಿಕೆಗಳು ಹೆಚ್ಚಾಗುತ್ತದೆ. ಬೇಡಿಕೆಗಳು ಹೆಚ್ಚಾದಾಗ ಒತ್ತಡಗಳು ಬರುತ್ತವೆ. ಎಸ್.ಎಂ ಕೃಷ್ಣ ಅವರ ಅವಧಿಯಲ್ಲಿ ಪಾದಯಾತ್ರೆ ಮಾಡಿದ್ವಿ, ನೀರು ಕೊಡಲು ಆಗಲ್ಲ ಎಂದು ಹೇಳಬೇಕಾಗಿತ್ತು. ತಮಿಳುನಾಡು – ಕರ್ನಾಟಕ ನಡುವೆ ಸಾಕಷ್ಟು ವ್ಯಾಜ್ಯಗಳು ನಡೆದಿವೆ. ಈಗ ಪ್ರಾಧಿಕಾರ ರಚನೆ ಆಗಿದೆ. ಒಂದೆಡೆ ಕಾನೂನಾತ್ಮಕ ಹೋರಾಟ ಮಾಡ್ತೇವೆ. ಪ್ರಾಧಿಕಾರ ರಚನೆ ಸಂಪೂರ್ಣ ನಿಯಂತ್ರಣ ಅದಕ್ಕೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ – ಕೆ.ಎಲ್ ರಾಹುಲ್‌ಗೆ ನಾಯಕತ್ವ, ಸೂರ್ಯನಿಗೂ ಚಾನ್ಸ್
Advertisement
Advertisement
ಡಿಸಿಎಂ ಹುದ್ದೆ ಸೃಷ್ಟಿ ವಿಚಾರದ ಕುರಿತು ಮಾತನಾಡಿ, ನನಗೆ ಗೊತ್ತಿಲ್ಲ, ಈ ವಿಚಾರ ಸಾರ್ವಜನಿಕ ವಲಯದಲ್ಲಿ ಚರ್ಚೆ ಮಾಡೋದಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ದ ಎಂದು ಸಿಎಂ ಈಗಾಗಲೇ ಹೇಳಿದ್ದಾರೆ. ಆ ಸಂದರ್ಭದ ಬಂದಾಗ ಸಿಎಂ, ಮತ್ತು ಕೇಂದ್ರ ನಾಯಕರು ಮಾಡುತ್ತಾರೆ. ಇದನ್ನು ಸಾರ್ವಜನಿಕ ವಲಯದಲ್ಲಿ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದು ಹೇಳಿದರು.
Web Stories