Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ಯಾಟೂಗೆ 22 ಹೆವಿ ಮೆಟಲ್‌ ಬಳಕೆಯಿಂದ ಚರ್ಮರೋಗ: ದಿನೇಶ್‌ ಗುಂಡೂರಾವ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟ್ಯಾಟೂಗೆ 22 ಹೆವಿ ಮೆಟಲ್‌ ಬಳಕೆಯಿಂದ ಚರ್ಮರೋಗ: ದಿನೇಶ್‌ ಗುಂಡೂರಾವ್‌

Bengaluru City

ಟ್ಯಾಟೂಗೆ 22 ಹೆವಿ ಮೆಟಲ್‌ ಬಳಕೆಯಿಂದ ಚರ್ಮರೋಗ: ದಿನೇಶ್‌ ಗುಂಡೂರಾವ್‌

Public TV
Last updated: February 28, 2025 4:11 pm
Public TV
Share
4 Min Read
dinesh gundu rao
SHARE

– ಕೇಕ್‌ಗಳಿಗೆ ಅಪಾಯಕಾರಿ ರಾಸಾಯನಿಕ ಬಳಕೆ
– ತಪಾಸಣೆ ಮುಂದಾದ ಆಹಾರ ಸುರಕ್ಷತಾ ಇಲಾಖೆ

ಬೆಂಗಳೂರು: ಆಹಾರ ಸುರಕ್ಷತೆ (Food Safety) ಮತ್ತು ಔಷಧ ಆಡಳಿತದ ಅಧಿಕಾರಿಗಳ ವಿಶ್ಲೇಷಣಾ ವರದಿಯ ಪ್ರಕಾರ, ಟ್ಯಾಟೂಗೆ ಬಳಸುವ ಇಂಕ್‌ನಲ್ಲಿ 22 ಹೆವಿ ಮೆಟಲ್‌ ಬಳಕೆ ಮಾಡುತ್ತಿರುವುದು ಕಂಡುಬಂದಿದೆ. ಈ ಟ್ಯಾಟೂ ಇಂಕ್ ನಲ್ಲಿರುವ ಮೈಕ್ರೋ ಆರ್ಗ್ಯಾನಿಸಮ್ ಮತ್ತು ಹೆವಿ ಮೆಟಲ್ಸ್ ಚರ್ಮದ ಮೂಲಕ ದೇಹವನ್ನು ಪ್ರವೇಶಿಸುತ್ತದೆ. ಇದರಿಂದ ಅನೇಕ ಚರ್ಮ ರೋಗಗಳು ಉಂಟಾಗುತ್ತವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ತಿಳಿಸಿದರು.

ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ ಹಾಗೂ ಹಸಿರು ಬಟಾಣಿಗೆ ಬಳಸುವ ಬಣ್ಣದಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳು (Carcinogenicity Element) ಪತ್ತೆಯಾದ ಬೆನ್ನಲ್ಲೇ ಸಚಿವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಶ್ರೀನಿವಾಸ್ ಅವರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದನ್ನೂ ಓದಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ದೈಹಿಕ ಹಲ್ಲೆ ನಡೆಸಿ ವಿಕೃತಿ – ಅಪ್ರಾಪ್ತೆ ಜನನಾಂಗಕ್ಕೆ 28 ಹೊಲಿಗೆ

Batani 2

ರಾಜ್ಯದಲ್ಲಿ ತಯಾರಾಗುವ ಮತ್ತು ಮಾರಾಟಕ್ಕಾಗಿ ಸರಬರಾಜಾಗುತ್ತಿರುವ ಔಷಧಗಳ ಮತ್ತು ಕಾಂತಿವರ್ಧಕ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳುವುದು ಮತ್ತು ಉತ್ತಮ ಗುಣಮಟ್ಟದ, ಸುರಕ್ಷಿತ ಹಾಗೂ ಪರಿಣಾಮಕಾರಿ ಔಷಧಗಳನ್ನು ನಿಯಂತ್ರಿತ ಬೆಲೆಗಳಲ್ಲಿ ಗ್ರಾಹಕರಿಗೆ ದೊರಕುವಂತೆ ಮಾಡುವುದೇ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಮುಖ್ಯ ಉದ್ದೇಶವಾಗಿರುತ್ತದೆ.

ಔಷಧ ಆಡಳಿತ ವಿಭಾಗದ ಅಮಲು ಜಾರಿ ಅಧಿಕಾರಿಗಳಿಂದ ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಔಷಧ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಜನವರಿ 2025ರಲ್ಲಿ 1,133 ಔಷಧಗಳ ಮಾದರಿಗಳನ್ನು ವಿಶ್ಲೇಷಣೆಗೆ ಪಡೆಯಲಾಗಿದೆ. ಅವುಗಳಲ್ಲಿ 938 ಉತ್ತಮ ಗುಣಮಟ್ಟದ ಔಷಧಗಳೆಂದು, 106 ಉತ್ತಮ ಗುಣಮಟ್ಟವಿಲ್ಲದ ಔಷಧಿಗಳೆಂದು ಘೋಷಿತವಾಗಿದೆ. ಫೆಬ್ರವರಿ ತಿಂಗಳಲ್ಲಿ 1,841 ಔಷಧ ಮಾದರಿಗಳನ್ನು ವಿಶ್ಲೇಷಣೆಗೆ ಪಡೆಯಲಾಗಿದೆ. ಇಲ್ಲಿಯವರೆಗೆ 58 ಮಾದರಿಗಳು ಅನುತ್ತಮ ಗುಣಮಟ್ಟದ ಔಷಧಿಗಳೆಂದು ಘೋಷಿತವಾಗಿದೆ ಎಂದು ವಿವರಿಸಿದರು.

Dinesh Gundurao

2024ರ ಡಿಸೆಂಬರ್‌ನಲ್ಲಿ ಕಾಂತಿವರ್ಧಕಗಳ ಗುಣಮಟ್ಟವನ್ನು ಪರೀಕ್ಷಿಸಲು ಇಂದಿನವರೆಗೆ 262 ಕಾಂತಿವರ್ಧಕ ಮಾದರಿಗಳನ್ನು ವಿಶ್ಲೇಷಣೆಗೆ ಪಡೆಯಲಾಗಿದೆ. ಅವುಗಳಲ್ಲಿ 120 ಉತ್ತಮ ಗುಣಮಟ್ಟದ ಕಾಂತಿವರ್ಧಕಗಳೆಂದು ಘೋಷಿತವಾಗಿದೆ. ಉಳಿದ ಮಾದರಿಗಳು ವಿಶ್ಲೇಷಣಾ ಹಂತದಲ್ಲಿರುತ್ತದೆ ಎಂದರು. ಇದನ್ನೂ ಓದಿ: ದಯವಿಟ್ಟು ಗಂಡಸರ ಬಗ್ಗೆ ಯೋಚಿಸಿ: ಪತ್ನಿ ದೌರ್ಜನ್ಯಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ

2024ರ ಡಿಸೆಂಬರ್ ಹಾಗೂ 2025ರ ಜನವರಿ ತಿಂಗಳಲ್ಲಿ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮದ 1940 ಮತ್ತು ಅದರಡಿಯ ನಿಯಾಮಾವಳಿಗಳನ್ನು ಉಲ್ಲಂಘನೆ ಮಾಡಿದ 75 ಸಂಸ್ಥೆಗಳ ವಿರುದ್ಧ ಮಾನ್ಯ ನ್ಯಾಯಾಲಯಗಳಲ್ಲಿ ಮೊಕದ್ದಮೆ ದಾಖಲಿಸಲು ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ NSQ ಬಂದಂತಹ ಪ್ರಕರಣಗಳಲ್ಲಿ ಜನವರಿ 2025ರ ಮಾಹೆಯಲ್ಲಿ ವಿಶೇಷ ಅಭಿಯಾನ ಕೈಗೊಂಡು ಸುಮಾರು 17 ಲಕ್ಷಕ್ಕಿಂತಲೂ ಹೆಚ್ಚಿನ ಮೌಲ್ಯದ ಅನುತ್ತಮ ಗುಣಮಟ್ಟವಲ್ಲದ ಔಷಧಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲಾಗಿದೆ ಎಂದು ತಿಳಿಸಿದರು.

Red Velvet Cake

ಮಾದಕ ಔಷಧಗಳ (NDPS) ದುರ್ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನವರಿ 2025ರ ಮಾಹೆಯಲ್ಲಿ ವಿಶೇಷ ಅಭಿಯಾನ ಕೈಗೊಂಡು ಒಟ್ಟು 488 ಔಷಧ ಮಳಿಗೆಗಳನ್ನು ಪರಿವೀಕ್ಷಿಸಿ ಅದರಲ್ಲಿ ನಿಯಮಗಳನ್ನು ಉಲ್ಲಂಘಿಸಿರುವ 400 ಮಳಿಗೆಗಳಿಗೆ ಕಾರಣ ಕೇಳುವ ನೋಟಿಸ್‌ ಜಾರಿಗೊಳಿಸಲಾಗಿದೆ. ನಂತರ ನೋಟಿಸ್‌ಗೆ ಸಮಂಜಸ ಉತ್ತರ ನೀಡದ ಸಂಸ್ಥೆಗಳ ಪೈಕಿ 213 ಪರವಾನಗಿಗಳನ್ನು ಅಮಾನತ್ತುಗೊಳಿಸಿ, 03 ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. 2025ರ ಫೆ.17 ರಿಂದ ಫೆ.19ರ ವರೆಗೆ ರಾಜ್ಯಾದ್ಯಂತ ಎಲ್ಲಾ ಔಷಧ ಮಳಿಗೆಗಳಲ್ಲಿ ಆಂಟಿಬಯೋಟಿಕ್ ಔಷಧಗಳ ದುರ್ಬಳಕೆ ಬಗ್ಗೆ ಅಮಲು ಜಾರಿ ಅಧಿಕಾರಿಗಳ ವಿಶೇಷ ತಪಾಸಣೆ ಕೈಗೊಂಡು 199 ಪರಿವೀಕ್ಷಣೆಗಳನ್ನು ನಡೆಸಲಾಗಿದೆ. 52 ಔಷಧ ಮಳಿಗೆಗಳಲ್ಲಿ ಆಂಟಿಬಯೋಟಿಕ್ ಔಷಧಗಳನ್ನು ಮಾರಾಟ ಮಾಡಿರುವುದು ಕಂಡುಬಂದಿರುತ್ತದೆ. ಈ 52 ಪ್ರಕರಣಗಳಲ್ಲಿ ಮೊಕದ್ದಮೆ ಹೂಡಲು ಗಮನಹರಿಸಲಾಗುತ್ತಿದೆ ಎಂದು ಹೇಳಿದರು.

tattoos3 1

ಟ್ಯಾಟೂ ಅನ್‌ಸೇಫ್‌:
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಅಧಿಕಾರಿಗಳು ಟ್ಯಾಟೂ ಹಾಕಲು ಉಪಯೋಗಿಸುವ ಇಂಕ್ ಅನ್ನು ಮಾರುಕಟ್ಟೆಯಿಂದ ಪಡೆದು ವಿಶ್ಲೇಷಣೆ ನಡೆಸಲಾಗಿದೆ. ವಿಶ್ಲೇಷಣಾ ವದರಿಯ ಪ್ರಕಾರ ಟ್ಯಾಟೂನಲ್ಲಿ 22 ಹೆವಿ ಮೆಟಲ್‌ ಇರುವುದು ಕಂಡುಬಂದಿದೆ. ಇದು ಔಷಧ ಮತ್ತು ಕಾಂತಿವರ್ಧಕ ಅಧಿನಿಯಮಗಳ ವ್ಯಾಪ್ತಿಗೆ ಒಳಪಟ್ಟಿರುವುದಿಲ್ಲ. ಈ ಟ್ಯಾಟು ಇಂಕ್ ನಲ್ಲಿರುವ ಮೈಕ್ರೋ ಆರ್ಗ್ಯಾನಿಸಮ್ ಮತ್ತು ಹೆವಿ ಮೆಟಲ್ಸ್ ಚರ್ಮದ ಮೂಲಕ ದೇಹವನ್ನು ಪ್ರವೇಶಿಸುತ್ತದೆ. ಇದರಿಂದ ಅನೇಕ ಚರ್ಮ ರೋಗಗಳು ಉಂಟಾಗುತ್ತವೆ. ಈ ಕುರಿತು ನಿಯಮಗಳನ್ನು ರೂಪಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕಿರುವುದರಿಂದ ಕ್ರಮ ಜರುಗಿಸಬೇಕು ಎಂದು ಕೇಂದ್ರಕ್ಕೆ ಒತ್ತಾಯಿಸಿದರು.

ಅಲ್ಲದೇ ರಿಂಗರ್ ಲ್ಯಾಕ್ಟೇಟ್ ದ್ರಾವಣಕ್ಕೆ ಸಂಬಂಧಿಸಿದಂತೆ 246 ಬ್ಯಾಚ್‌ನ ಮಾದರಿಗಳಲ್ಲಿ 113 ಅನುತ್ತಮ ಗುಣಮಟ್ಟದೆಂದು ಘೋಷಿತವಾಗಿದೆ. ಈ ಸಂಬಂಧ ತಯಾರಿಕಾ ಸಂಸ್ಥೆಯಾದ ಪಶ್ಚಿಮ್‌ಬಂಗಾ ವಿರುದ್ಧ ವಿವಿಧ ನ್ಯಾಯಾಲಯಗಳಲ್ಲಿ 9 ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಇನ್ನುಳಿದ ಅನುತ್ತಮ ಗುಣಮಟ್ಟದ 25 ಪ್ರಕರಣಗಳಲ್ಲಿ ಮೊಕದ್ದಮೆ ಹೂಡಲು ಅನುಮತಿ ನೀಡಲಾಗಿದ್ದು, ಮೊಕದ್ದಮೆ ಹೂಡುವ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಸುಧಾರಣಾ ಕ್ರಮಗಳೇನು?
ಈ ಕಳಪೆ ಗುಣಮಟ್ಟದ ಔಷಧಗಳು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗದಂತೆ ತಡೆಯಬೇಕು. ಈಗ ಇರುವ ದಾಸ್ತಾನುಗಳನ್ನು ಹಿಂಪಡೆಯಲು ಚಿಲ್ಲರೆ ಔಷಧ ಮಳಿಗೆಗಳು / ಸಗಟು ಮಾರಾಟಗಾರರು / ತಯಾರಿಕಾ ಸಂಸ್ಥೆಗಳ ವಿವರಗಳನ್ನು ಗಣಕೀಕರಣಗೊಳಿಸಲಾಗುತ್ತಿದೆ. ಶೀಘ್ರದಲ್ಲಿ ಸದರಿ ತಂತ್ರಾಂಶವನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.\

tattoo 1

ಆಹಾರ ಸುರಕ್ಷತೆ:
2025ರ ಜನವರಿಯಲ್ಲಿ 3,608 ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, ಅವುಗಳಲ್ಲಿ 26 ಮಾದರಿಗಳು ಅಸುರಕ್ಷಿತ ಮತ್ತು 28 ಮಾದರಿಗಳು ಕಳಪೆ ಎಂದು ವರದಿಯಾಗಿದೆ. 2025ರ ಫೆಬ್ರವರಿ 2025ರ ಮಾಹೆಯಲ್ಲಿ 2,543 ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, ಅವುಗಳಲ್ಲಿ 8 ಮಾದರಿಗಳು ಅಸುರಕ್ಷಿತ ಮತ್ತು 5 ಮಾದರಿಗಳು ಕಳಪೆ ಎಂದು ವರದಿಯಾಗಿದೆ ಎಂದು ಸಚಿವರು ವಿವರಿಸಿದರು.

ಕೇಕ್‌ನಲ್ಲಿ ತಗ್ಗಿದ ಕೃತಕ ಬಣ್ಣದ ಪ್ರಮಾಣ:
2024ರ ಮಾಹೆಯಲ್ಲಿ ಕೇಕ್ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬಳಸುತ್ತಿರುವ ಕುರಿತಂತೆ 295 ಮಾದರಿಗಳನ್ನ ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು ಅವುಗಳಲ್ಲಿ 12 ಮಾದರಿಗಳು (ಶೇ.4.06ರಷ್ಟು) ಅಸುರಕ್ಷಿತ ಎಂದು ವರದಿಯಾಗಿತ್ತು. 2025ರಲ್ಲಿ ಪುನಃ ಪರಿಶೀಲನೆ ನಡೆಸಿದಾಗ 7 ಮಾದರಿಗಳು ಅನ್‌ಸೇಫ್‌ ಎಂದು ವರದಿ ಬಂದಿದೆ. ಹೀಗಾಗಿ ಉದ್ದಿಮೆದಾರರಿಗೆ ನಿಗದಿತ ಮಿತಿಯೊಳಗೆ ಬಣ್ಣ ಬಳಸುವಂತೆ ಅರಿವು ಮೂಡಿಸಲಾಗಿದೆ. ಜೊತೆಗೆ ಮತ್ತೊಂದು ಸುತ್ತಿನಲ್ಲಿ ಕೇಕ್‌ ಟೆಸ್ಟಿಂಗ್‌ ಮಾಡಲು ಆಹಾರ ಇಲಾಖೆಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

TAGGED:bengaluruCarcinogenicitydinesh gundu raofood safety departmentಆಹಾರ ಸುರಕ್ಷತಾ ಇಲಾಖೆಕೃತಕ ಬಣ್ಣಟ್ಯಾಟೂದಿನೇಶ ಗುಂಡೂರಾವ್
Share This Article
Facebook Whatsapp Whatsapp Telegram

Cinema news

AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema
Rajanikanth
ಸಂಕ್ರಾಂತಿ ದಿನವೇ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ತಲೈವಾ.!
Cinema Latest South cinema Top Stories
Samruddhi Ram
ಗ್ಯಾಮ್ಲಿಂಗ್‌ನಲ್ಲಿ ಹಣ ಕಳೆದುಕೊಂಡೆ, 3 ವರ್ಷಗಳಿಂದ ಮನೆಯಿಂದಾಚೆಯಿದ್ದೀನಿ, ಇವರಿಂದ ಬದುಕೋಕೆ ಆಗ್ತಿಲ್ಲ: ಸಮೃದ್ಧಿ ರಾಮ್‌ ಕಣ್ಣೀರು
Bengaluru City Cinema Districts Karnataka Latest Main Post Sandalwood
Pratibha Shetty Samriddhi Ram Karunya Ram
ಮೋಸ ಮಾಡಿದವ್ರು ಉದ್ಧಾರ ಆಗಲ್ಲ – ಸಮೃದ್ಧಿ ರಾಮ್‌ ವಿರುದ್ಧ ಪ್ರತಿಭಾ ಶೆಟ್ಟಿ ಗರಂ
Bengaluru City Cinema Crime Karnataka Latest States Top Stories

You Might Also Like

02 14
Districts

Video | ಅಗ್ನಿ ಅವಘಡ – ಶೀಟ್‌ ಮನೆಯಲ್ಲಿದ್ದ 5 ಲಕ್ಷ ನಗದು ಭಸ್ಮ!

Public TV
By Public TV
2 hours ago
Delhi Weather 1
Latest

ಬೆಚ್ಚಿ ಬೀಳಿಸಿದ ವರದಿ – ದೆಹಲಿಯಲ್ಲಿ ಒಂದೇ ವರ್ಷ 9,000 ಕ್ಕೂ ಹೆಚ್ಚು ಸಾವು!

Public TV
By Public TV
2 hours ago
Mandya Sankranti Fire
Districts

ಸಂಕ್ರಾಂತಿ ವೇಳೆ ಕಿಚ್ಚು ಹಾಯಿಸುವಾಗ ಯಡವಟ್ಟು – ಜನರ ಮೇಲೆ ಎಗರಿದ ಎತ್ತುಗಳು, ಇಬ್ಬರಿಗೆ ಗಾಯ

Public TV
By Public TV
2 hours ago
Dinesh Gundu Rao 1
Bengaluru City

ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Public TV
By Public TV
2 hours ago
Harleen Deol
Cricket

ಡಿಯೋಲ್‌ ಡಿಚ್ಚಿ, ಮುಂಬೈ ಮೇಲೆ ವಾರಿಯರ್ಸ್‌ ಸವಾರಿ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆದ್ದ ಯುಪಿ

Public TV
By Public TV
2 hours ago
supreme Court 1
Court

`ಜನನಾಯಗನ್’ ಮಧ್ಯಂತರ ಪರಿಹಾರಕ್ಕೆ ಸುಪ್ರೀಂ ನಕಾರ – KVN ಪ್ರೊಡಕ್ಷನ್ ಅರ್ಜಿ ವಜಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?