Connect with us

Bengaluru City

ನನ್ನ ಪರವಾಗಿ ಯಾವುದೇ ಪ್ರತಿಭಟನೆ ಮಾಡಬೇಡಿ: ಕೈ ಕಾರ್ಯಕರ್ತರಲ್ಲಿ ಡಿಕೆಶಿ ಮನವಿ

Published

on

ಬೆಂಗಳೂರು: ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಡಿ ಹಾಗೂ ಐಟಿ ಇಲಾಖೆ ಟಾರ್ಗೆಟ್ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸಚಿವ ಡಿಕೆ ಶಿವಕುಮಾರ್, ನನ್ನ ಪರ ಯಾರು ಪ್ರತಿಭಟನೆ ಮಾಡಬೇಡಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ತಮ್ಮ ಟ್ವಿಟ್ಟರ್ ನಲ್ಲಿ ಡಿಕೆಶಿ, ನನ್ನ ಪರವಾಗಿ ಯಾವುದೇ ಪ್ರತಿಭಟನೆ, ಚಳವಳಿ, ಹೋರಾಟ ಮಾಡಬಾರದು ಎಂದು ಯುವ ಕಾಂಗ್ರೆಸ್ ಮುಖಂಡರಲ್ಲಿ ಮನವಿ ಮಾಡಿದ್ದಾರೆ.

ನನಗೆ ಈ ನೆಲದ ಕಾನೂನಿನ ಮೇಲೆ ಅಪಾರ ಗೌರವ ಮತ್ತು ನಂಬಿಕೆ ಇದೆ. ನನಗೆ ಎದುರಾಗಿರುವ ಸವಾಲು ಹಾಗೂ ಸಮಸ್ಯೆಗಳನ್ನು ಕಾನೂನಾತ್ಮಾಕವಾಗಿ ಹಾಗೂ ರಾಜಕೀಯವಾಗಿ ಎದುರಿಸುವ ಶಕ್ತಿಯೂ ಇದೆ. ರಾಜಕೀಯ ಎದುರಾಳಿಗಳಿಗೆ ರಾಜಕೀಯವಾಗಿಯೇ ಉತ್ತರ ನೀಡುತ್ತೇನೆ. ಹೀಗಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಯಾವುದೇ ಚಳವಳಿಯಲ್ಲಿ ನಡೆಸುವುದಾಗಲಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವುದಾಗಲಿ ಮಾಡುವುದು ಬೇಡ. ಇಂಥ ಹೋರಾಟಗಳಿಂದ ಜನಸಾಮಾನ್ಯರಿಗೂ ತೊಂದರೆ ಆಗುತ್ತದೆ ಎಂದು ತಿಳಿಸಿದ್ದಾರೆ.

ಇಂದು ನಗರದ ಆದಾಯ ತೆರಿಗೆ ಇಲಾಖೆ ಎದುರು ಶಿವಕುಮಾರ್ ವಿರುದ್ಧದ ವಿಚಾರಣೆಯನ್ನು ವಿರೋಧಿಸಿ ನೂರಕ್ಕೂ ಹೆಚ್ಚು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಯಾಗಿರುವ ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಕೂಡ ಭಾಗಿಯಾಗಿದ್ದರು. ಇದನ್ನೂ ಓದಿ:  ಡಿಕೆಶಿ ಮೇಲಿನ ಐಟಿ ವಿಚಾರಣೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಆರೋಪಿ ನಲಪಾಡ್ ಪ್ರತ್ಯಕ್ಷ!

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Click to comment

Leave a Reply

Your email address will not be published. Required fields are marked *