ಮಂಡ್ಯ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಒತ್ತಾಯದ ಮೇರೆಗೆ ಮಡ್ಯ ಸಂಘರ್ಷ ಶಮನಕ್ಕೆ ಕನಕಪುರ ಬಂಡೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಎಂಟ್ರಿಯಾಗಿದ್ದಾರೆ.
ಸುಮಲತಾ ಅಂಬರೀಶ್ ಅವರ ಜೊತೆ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡರೊಂದಿಗೆ ಡಿಕೆಶಿ ಸಭೆ ನಡೆಸಲು ನಿರ್ಧರಿಸಿದ್ದಾರೆ. ಹೀಗಾಗಿ ನಾಳೆ(ಭಾನುವಾರ) ಬೆಂಗಳೂರಿನಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರಿಗೆ ಡಿಕೆಶಿ ಔತಣಕೂಟ ಏರ್ಪಡಿಸಲಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.
ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಕೆ.ಬಿ ಚಂದ್ರಶೇಖರ್ ಮನವೊಲಿಕೆಗೆ ಈ ಮೂಲಕ ಕಸರತ್ತು ನಡೆಸಲಿದ್ದಾರೆ. ಇವರೆಲ್ಲರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸುಮಲತಾ ಅವರಿಗೆ ಬೆಂಬಲ ನೀಡುವ ಬಗ್ಗೆ ಮಾತನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಸಭೆಯಲ್ಲಿ ಚರ್ಚೆ ನಡೆಸಲಿದ್ದು, ಮೈತ್ರಿ ಸರ್ಕಾರವನ್ನು ಬೆಂಬಲಿಸುವಂತೆ ಮನವೊಲಿಸುವ ಸಾಧ್ಯತೆಗಳಿವೆ.
ಮಂಡ್ಯದಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಫೈಟ್ ಇದೆ. ಹೀಗಾಗಿ ಕಾಂಗ್ರೆಸ್ಸಿನ ಬಹುತೇಕ ಮುಖಂಡರು ಸುಮಲತಾ ಅವರಿಗೆ ಬೆಂಬಲವನ್ನು ಸೂಚಿಸಿದ್ದಾರೆ. ಈ ವಿಚಾರ ಮೃತ್ರಿ ಸರ್ಕಾರದ ಅಸಮಾಧಾನಕ್ಕೆ ಕಾರಣವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv