ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಕೇಸ್‍ಗೆ ಸಂಂಧಿಸಿದಂತೆ ವಿಚಾರಣೆಗೆ ಬರುವಂತೆ ಇಡಿ ಅಧಿಕಾರಿಗಳು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹಾಗೂ ಐವರಿಗೆ ಸಮನ್ಸ್ ನೋಟಿಸ್ ಜಾರಿ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಸೇರಿದಂತೆ ಗೆಳೆಯ ಸುನಿಲ್ ಶರ್ಮಾ, ಅಂಜನೇಯ, ರಾಜೇಂದ್ರ ಸೇರಿ ಐವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಮುಖ್ಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಡಿಕೆಶಿ ದೆಹಲಿಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದಾರೆ. ಸಮನ್ಸ್ ಆಧರಿಸಿ ನಿರೀಕ್ಷಣಾ ಜಾಮೀನಿನ ಅರ್ಜಿಗೆ ತಯಾರಿ ಮಾಡಿಕೊಳ್ಳಲಿದ್ದಾರೆ.
Advertisement
Advertisement
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‍ಎ) ಅಡಿಯಲ್ಲಿ ಇಡಿ ಕೇಸ್ ದಾಖಲಿಸಿಕೊಂಡಿದ್ದರಿಂದ ಡಿಕೆಶಿಗೆ ಬಂಧನದ ಭೀತಿ ಎದುರಾಗಿದೆ. ಶಿವಕುಮಾರ್ ಜೊತೆಗೆ ಸಚಿನ್ ನಾರಾಯಣ್, ಶರ್ಮ ಟ್ರಾವೆಲ್ಸ್ ನ ಸುನೀಲ್ ಕುಮಾರ್ ಶರ್ಮ, ದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಆಂಜನೇಯ ಹನುಮಂತಯ್ಯ ಮತ್ತು ರಾಜ್ಯ ಸರಕಾರದ ನಿವೃತ್ತ ಸಿಬ್ಬಂದಿ ರಾಜೇಂದ್ರ ಅವರನ್ನು ಆರೋಪಿಯನ್ನಾಗಿಸಿ ಕೇಸ್ ದಾಖಲಾಗಿತ್ತು.
Advertisement
Advertisement
ಏನಿದು ಪ್ರಕರಣ?
ದೆಹಲಿ ನಿವಾಸದಲ್ಲಿ ಪತ್ತೆಯಾದ 8.5 ಕೋಟಿ ರೂ. ಸಿಕ್ಕ ಹಣದ ಸಂಬಂಧ ಆದಾಯ ತೆರಿಗೆ ಇಲಾಖೆಯ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿತ್ತು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿತ್ತು. ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಐಟಿ ಇಲಾಖೆ ಹಿರಿಯ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿದ್ದರು. ಈ ದೂರಿನಲ್ಲಿ ಹವಾಲ ಹಣದ ಮೂಲಕ ಕೋಟಿ ಕೋಟಿ ಹಣವನ್ನು ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಕಳುಹಿಸಿಕೊಟ್ಟಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv