ಬೆಳಗಾವಿ: ಬಿಜೆಪಿಯಿಂದ ದೇಶಕ್ಕೆ ದೊಡ್ಡ ಆಘಾತವಿದೆ ಎಂಬುವುದನ್ನು ಜನರು ಅರಿತಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇನ್ನು ಸಂಪೂರ್ಣ ಚುನಾವಣಾ ಫಲಿತಾಂಶ ಹೊರ ಬಂದಿಲ್ಲ. ಹಾಗಾಗಿ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಒಳ್ಳೆಯ ಭವಿಷ್ಯ ಇದೆ ಎಂದು ದೇಶದ ಜನರು ಅಪೇಕ್ಷೆಯಲ್ಲಿದ್ದಾರೆ. ಬಿಜೆಪಿ ಸರ್ಕಾರದಿಂದ ಅನೇಕ ಸಮಸ್ಯೆಗಳನ್ನು ಅನುಭವಿಸಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ ದೇಶದಲ್ಲಿ ಹೆಚ್ಚಾಗುತ್ತಿರೋದರ ಪರಿಣಾಮ ಇಂದಿನ ಫಲಿತಾಂಶ ಹೊರ ಬರುತ್ತಿದೆ ಎಂದು ಹೇಳುವ ಮೂಲಕ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ರು.
Advertisement
ದೇಶದಲ್ಲಿ ಮೋದಿ ಅಲೆ ಕಡಿಮೆ ಅಗುತ್ತಿದೆ. ಜನರು ಅಧಿಕಾರ ಕೊಟ್ಟು ನೋಡಿದ್ದಾರೆ. ಬಿಜೆಪಿಯಲ್ಲಿಯೇ ಆಂತರಿಕ ಕಚ್ಚಾಟಗಳಿವೆ. ಜನ ಬಿಜೆಪಿ ಬಿಟ್ಟು ಬೇರೆ ಪಕ್ಷಗಳತ್ತ ಬರುತ್ತಿದ್ದಾರೆ. ಅಧಿವೇಶನ ನಡೆಯುತ್ತಿದ್ದು, ನನ್ನ ನಾಲ್ಕೈದು ಪ್ರಶ್ನೆಗಳಿವೆ. ಹಾಗಾಗಿ ಅಧಿವೇಶನ ಬಳಿಕ ಚುನಾವಣೆ ಫಲಿತಾಂಶ ನೋಡಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಚಿವರು ಹೇಳಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv