ಹುಬ್ಬಳ್ಳಿ/ಧಾರವಾಡ: ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಗದಿದ್ದರೆ ಸುಮಲತಾ ಅವರು ಪಕ್ಷೇತರವಾಗಿ ಸ್ಪರ್ಧಿಸುತ್ತಾರೆ ಎಂದು ಮಂಡ್ಯದಲ್ಲಿ ಅಭಿಮಾನಿಗಳು ಹೇಳಿದ್ದಾರೆ. ಆದರೆ ಈ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಸುಮಲತಾ ಕಾಂಗ್ರೆಸ್ ಪಕ್ಷದ ವಿರುದ್ಧ ಹೋಗುವುದಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಸುಮಲತಾ ಮನವೊಲಿಸಲು ಯಾರು ಏನೂ ಹೇಳಿಲ್ಲ. ಆದರೆ ನಾನು ಅವರನ್ನು ಮಾತನಾಡಿಸಿ ಪಕ್ಷದ ನಿಲುವುವನ್ನು ತಿಳಿಸಿದ್ದೆ. ಪಕ್ಷ ಈಗಾಗಲೇ ಮಂಡ್ಯ ವಿಚಾರದಲ್ಲಿ ತೀರ್ಮಾನ ಮಾಡಿದೆ. ಈ ವಿಚಾರದಲ್ಲಿ ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಕೂಡ ಸ್ಪಷ್ಟ ಪಡಿಸಿದ್ದಾರೆ. ಆದರೆ ಸುಮಲತಾ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಹೋಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದರು.
Advertisement
Advertisement
ಸುಮಲತಾ ಅವರ ಬಗ್ಗೆ ರೇವಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆ ವಿಚಾರದ ಬಗ್ಗೆ ನನಗೆ ಏನು ಗೊತ್ತಿಲ್ಲ. ತಿಳಿದುಕೊಂಡು ಪ್ರತಿಕ್ರಿಯಿಸುವೆ. ಈ ಬಗ್ಗೆ ಯಾವ ಮಾಹಿತಿಯೂ ತಿಳಿಯದೇ ಮಾತನಾಡುವುದು ಸರಿಯಲ್ಲ ಎಂದು ಶಿವಕುಮಾರ್ ಹೇಳಿದ್ದಾರೆ.
Advertisement
ಬಜೆಟ್ ನಲ್ಲಿ ಮಹಾದಾಯಿ ಹಣ ಮೀಸಲಿಡದ ವಿಚಾರವಾಗಿ ಮಾತನಾಡಿದ ಡಿಕೆಶಿ ಅವರು, ಬಜೆಟ್ ನಲ್ಲಿ ಘೋಷಣೆ ಮಾಡದಿದ್ದರೂ ಸರ್ಕಾರ ಯೋಜನೆ ಕೈಗೆತ್ತಿಕೊಳ್ಳಲಿದೆ. ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಲಿ. ನಾವು ಯೋಜನೆ ಕಾರ್ಯಾರಂಭ ಮಾಡುತ್ತೇವೆ. ಎಲ್ಲ ರೈತರು ಹೋರಾಟ ಮಾಡಿದ್ದಾರೆ. ಹೀಗಾಗಿ ಇರುವ ನೀರನ್ನು ಉಪಯೋಗ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv