ಬೆಂಗಳೂರು: ಗುರುವಾರ ಸ್ಯಾಂಡಲ್‍ವುಡ್ ಸ್ಟಾರ್ ಗಳ ಮನೆಗೆ ಲಗ್ಗೆ ಇಟ್ಟ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ಇಂದೂ ಮಂದುವರಿದಿದೆ. ಆದರೆ ಅಚ್ಚರಿ ಎಂಬಂತೆ ನಿನ್ನೆ ರಾತ್ರಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ನಟ ಪುನೀತ್ ರಾಜ್‍ಕುಮಾರ್ ಮನೆ ಮುಂದೆ ಪ್ರತ್ಯಕ್ಷವಾಗಿದ್ದರು.
ಪುನೀತ್ ರಾಜ್‍ಕುಮಾರ್ ಮನೆ ಬಳಿಯೇ ಸಚಿವರು ತಮ್ಮ ಕಾರಿನಿಂದ ಇಳಿದಿದ್ದಾರೆ. ಬಳಿಕ ಇನ್ನೂ ಮುಗಿದಿಲ್ವಾ ಅಂತ ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ. ನಂತರ ಏನೂ ಆಗೋದಿಲ್ಲ ತಲೆ ಕೆಡಿಸಿಕೊಳ್ಳಬೇಡಿ ಅಂತ ಅಪ್ಪು ಅಭಿಮಾನಿಗಳಲ್ಲಿ ಧೈರ್ಯ ತುಂಬಿ ನಡೆದುಕೊಂಡೇ ಮನೆಗೆ ಹೋಗಿದ್ದಾರೆ. ಇದಕ್ಕೂ ಮುನ್ನ ಡಿ.ಕೆ ಶಿವಕುಮಾರ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಇದನ್ನೂ ಓದಿ: ಶಿವಣ್ಣ, ಪುನೀತ್, ಸುದೀಪ್, ಯಶ್, ರಾಧಿಕಾ ಮನೆಯಲ್ಲಿ ಐಟಿ ರೇಡ್ ಆಗಿದ್ದು ಯಾಕೆ?
Advertisement
Advertisement
ಕನ್ನಡ ಚಿತ್ರರಂಗದಲ್ಲಿ ಬಹುಕೋಟಿ ಸಿನಿಮಾ ಮಾಡುವ ನಿರ್ಮಾಪಕರ ಮನೆಗಳ ಮೇಲೂ ಐಟಿ ರೇಡ್ ಮಾಡಿದ್ದರು. ಗುರುವಾರ ಬೆಳಗ್ಗೆ 6 ಗಂಟೆಗೆ ಶುರುವಾದ ದಾಳಿ, ರಾತ್ರಿ 11 ಗಂಟೆವರೆಗೂ ಮುಂದುವರಿದಿತ್ತು. ಕನ್ನಡ ಸಿನಿಮಾ ಇಂಡಸ್ಟ್ರಿಯನ್ನು ನಡುಗಿಸಿದ ಐಟಿ ದಾಳಿಗೆ ಹೈ ಬಜೆಟ್ಟಿನ ಮೂರು ಸಿನಿಮಾಗಳೇ ಕಾರಣ ಎನ್ನಲಾಗಿದೆ.
Advertisement
ಇತ್ತ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ ಡಿಕೆಶಿ ಮನೆ ಹಾಗೂ ಕೋಡಿಹಳ್ಳಿಯ ಡಿ.ಕೆ ಸುರೇಶ್ ಮನೆಗೆ ನಾಲ್ಕು ಜನ ಅಧಿಕಾರಿಗಳು ಬುಧವಾರ ಭೇಟಿ ನೀಡಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಚಿವ ಡಿ.ಕೆ ಶಿವಕುಮಾರ್ ಮನೆಯ ಬಾಗಿಲಿಗೆ ನೋಟಿಸ್ ಅಂಟಿಸಿ ತೆರಳಿದ್ದರು. ಮನೆಯ ಬಾಗಿಲ ಮೇಲೆ ಐಟಿ ಅಧಿಕಾರಿಗಳು ನೋಟಿಸ್ ಅಂಟಿಸಿರುವ ಹಿನ್ನೆಲೆಯಲ್ಲಿ ಸಚಿವ ಡಿಕೆಶಿ ತಾಯಿ ಗೌರಮ್ಮ ಅವರು ಬೆಂಗಳೂರಿಗೆ ತೆರಳಿದ್ದು, ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಸಚಿವರ ಆಪ್ತ ವಲಯದಿಂದ ಮಾಹಿತಿ ತಿಳಿದು ಬಂದಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv