Connect with us

Chikkaballapur

ಸಾರ್ವಜನಿಕರೇ ಸ್ವಯಂ ಜನತಾ ಕರ್ಫ್ಯೂ ವಿಧಿಸಿಕೊಳ್ಳಿ: ಸುಧಾಕರ್

Published

on

– ಲಾಕ್‍ಡೌನ್ ಮಾಡಿದ್ರೆ ಜನಜೀವನ ಅಸ್ತವ್ಯಸ್ತ

ಚಿಕ್ಕಬಳ್ಳಾಪುರ: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ವೇಗವಾಗಿ ಹರಡುತ್ತಿದೆ. ಎರಡನೇ ಅಲೆ ನಮ್ಮ ನಿರೀಕ್ಷೆಯನ್ನು ಮೀರಿ ಪರಿಸ್ಥಿತಿ ಭೀಕರವಾಗಿಸುತ್ತಿದೆ. ಹೀಗಾಗಿ ಸಾರ್ವಜನಿಕರೇ ಸ್ವತಃ ಜನತಾ ಕರ್ಫ್ಯೂ ವಿಧಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ನಗರದಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‍ಡೌನ್ ಪರ್ಯಾಯ ಅಲ್ಲ, ಇದರಿಂದ ಜನಜೀವನ ಅಸ್ತವ್ಯಸ್ಯವಾಗುತ್ತೆ. ಜೀವನೋಪಾಯಕ್ಕೆ ಕಷ್ಟ ಆಗುತ್ತೆ. ಇದೆಲ್ಲವನ್ನೂ ಅರ್ಥ ಮಾಡಿಕೊಂಡು ಜನರೇ ಜನತಾ ಕರ್ಫ್ಯೂ ವಿಧಿಸಿಕೊಳ್ಳಬೇಕು ಎಂದರು.

ಅನಗತ್ಯವಾಗಿ ಗುಂಪುಗೂಡಬೇಡಿ, ವಿವಾಹ, ಸಮಾರಂಭಗಳನ್ನು ಸರಳವಾಗಿ ಮಾಡಿ. ಬಹಳ ದೊಡ್ಡ ಸಂಖ್ಯೆಯಲ್ಲಿ ಸಮಾರಂಭ ಮಾಡಬಾರದು. ಈ ಬಗ್ಗೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಧಾರ್ಮಿಕ, ರಾಜಕೀಯ, ವಿವಾಹ ಹಾಗೂ ಇತರೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ಕಡಿವಾಣ ಹಾಕಬೇಕು. ಇಲ್ಲವಾದರೆ ಆಯಾ ಜಿಲ್ಲಾಡಳಿತಗಳನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *