ಬೆಂಗಳೂರು: ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿವಿ ಸದಾನಂದ ಗೌಡ ಅವರು ಶನಿವಾರ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಈ ಕುರಿತು ಸಚಿವರು ಟ್ವೀಟ್ ಮಾಡಿದ್ದು, ನಾನು ನಾಳೆ ಮತ್ತು ನಾಡಿದ್ದು ಕೇಂದ್ರ ಸರಕಾರದ ಪರವಾಗಿ ಮಳೆ ಹಾನಿಗೆ ತತ್ತರಿಸಿರುವ ಕೊಡಗು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದು ದಿನ ಪೂರ್ತಿ ಅಲ್ಲೇ ಇರಲಿದ್ದೇನೆ. ಅದೇ ರೀತಿ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮಳೆ ಹಾನಿಗೊಳಗಾದ ಜನರೊಂದಿಗೆ ಇದ್ದು ಜಿಲ್ಲಾಡಳಿತದ ಸಭೆ ನಡೆಸಲಿದ್ದೇವೆ ಅಂತ ಬರೆದುಕೊಂಡಿದ್ದಾರೆ. ಅಲ್ಲದೇ ಈ ಟ್ವೀಟನ್ನು ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಪ್ರತಾಪ್ ಸಿಂಹ ಅವರಿಗೆ ಟ್ಯಾಗ್ ಮಾಡಿದ್ದಾರೆ.
Advertisement
Advertisement
ಕಳೆದ ಹಲವು ದಿನಗಳಿಂದ ದಕ್ಷಿಣ ಕನ್ನಡ ಹಾಗೂ ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ತುಂಬಿ ಹರಿಯುತ್ತಿರೋ ಪರಿಣಾಮ ಜನಜೀವನ ಅಸ್ತವ್ಯಸ್ತ ಆಗಿದೆ. ಹಲವು ಮನೆಗಳು, ಧಾರ್ಮಿಕ ಸ್ಥಳಗಳು ಜಲಾವೃತವಾಗಿದ್ದು, ಕಂಡು ಕೇಳರಿಯದ ಮಳೆಗೆ ಜನಸಾಮಾನ್ಯರು ನಲುಗಿ ಹೋಗಿದ್ದಾರೆ.
Advertisement
ಕೊಡಗಿನಲ್ಲಿ ಈಗಾಗಲೇ ಮಳೆಯಲ್ಲಿ ನಿರಾಶ್ರಿತರಾದವರಿಗೆ 10 ಗಂಜಿಕೇಂದ್ರಗಳನ್ನು ತೆರೆಯಲಾಗಿದ್ದು, ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ ನಡೆಸಿ ಗುಡ್ಡದಲ್ಲಿ ಸಿಲುಕಿಕೊಂಡವರ ರಕ್ಷಣೆ ನಡೆಯುತ್ತಿದೆ. ಕೊಡಗಿನಲ್ಲಿ ಕುಸಿದು ಬಿದ್ದು ರಸ್ತೆ ಸಂಪರ್ಕ ಕಡಿತಕ್ಕೆ ಕಾರಣವಾಗಿರುವ ರಸ್ತೆಗಳ ದುರಸ್ತಿಗಾಗಿ ಲೋಕೋಪಯೋಗಿ ಇಲಾಖೆಯ ಉಪವಿಭಾಗೀಯ ಕಚೇರಿಯನ್ನೇ ಮಡಿಕೇರಿಯಲ್ಲಿ ಇಂದಿನಿಂದ ತೆರೆಯಲಾಗುತ್ತಿದೆ.
Advertisement
ನಾನು ನಾಳೆ ಮತ್ತು ನಾಡಿದ್ದು ಕೇಂದ್ರ ಸರಕಾರದ ಪರವಾಗಿ ಮಳೆ ಹಾನಿಗೆ ತತ್ತರಿಸಿರುವ ಕೊಡಗು ಧಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದು ದಿನ ಪೂರ್ತಿ ಅಲ್ಲೇ ಇರಲಿದ್ದೇನೆ
ಅದೇ ರೀತಿ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿನೀಡಿ ಮಳೆ ಹಾನಿಗೊಳಗಾದ ಜನರೊಂದಿಗೆ ಇದ್ದು ಜಿಲ್ಲಾಡಳಿತದಸಭೆ ನಡೆಸಲಿದ್ದೇವೆ Sri @nalinkateel Sri @mepratap
— Sadananda Gowda (@DVSadanandGowda) August 17, 2018
ಈಗಾಗಲೇ ಸ್ಥಳೀಯರ ನೆರವಿನಿಂದ ಸಂತ್ರಸ್ತರನ್ನು ಮಡಿಕೇರಿಗೆ ಸ್ಥಳಾಂತರಿಸಲಾಗಿದೆ. ನೀರು ಹರಿವು ಹೆಚ್ಚಾಗಿರುವ ಕಡೆಗಳಿಗೆ ತೆರಳಲು ಅಸಾಧ್ಯವಾಗಿರುವ ಸ್ಥಳಗಳಿಗೆ ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಬೇಕಿದೆ ಅದರೆ ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ಅ ಸ್ಥಳಗಳಿಗೆ ತಲುಪಲು ಕಷ್ಟಕರವಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv