ನಮಗೆ ದಶರಥ ರಾಮ ಬೇಕು, ಮೋದಿ ರಾಮ ಬೇಡ- ಜಿ. ಪರಮೇಶ್ವರ್ ಹೊಸ ವಿವಾದ

Public TV
1 Min Read
G. Parameshwara

ಬೆಂಗಳೂರು: ನಮಗೆ ಮೋದಿ (Narendra Modi) ರಾಮಬೇಡ, ದಶರಥ ರಾಮಬೇಕು ಅಂತ ಗೃಹ ಸಚಿವ ಪರಮೇಶ್ವರ್ (G. Parameshwara) ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ‌.

ನಿನ್ನೆ ಸಿಎಂ ಸಿದ್ದರಾಮಯ್ಯ (Siddaramaiah) ಜೈ ಶ್ರೀರಾಮ್ ಅಂತ ಘೋಷಣೆ ಕೂಗಿದ್ದಕ್ಕೆ ಬಿಜೆಪಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಜೈ ಶ್ರೀರಾಮ್ ಅಂದರೆ ತಪ್ಪೇನು? ನಾವೆಲ್ಲರೂ ಜೈ ಶ್ರೀರಾಮ್ ಅಂತ ಹೇಳಿದ್ದೇವೆ. ಹೇಳದೇ ಇದ್ದರೆ ಶ್ರೀರಾಮನ ವಿರೋಧಿ ಅಂತಾರೆ. ಹೇಳಿದರೆ ಹೀಗೆ ಅಂತಾರೆ. ಇದರಲ್ಲಿ ಯಾವುದು ಸರಿ ಅಂತ ಪ್ರಶ್ನೆ ಮಾಡಿದ್ರು. ಇದನ್ನೂ ಓದಿ: ಸಾರ್ವಜನಿಕರಿಗೆ ತೆರೆಯುತ್ತಿದ್ದಂತೆಯೇ  ರಾಮಮಂದಿರಕ್ಕೆ ಹರಿದು ಬರ್ತಿದೆ ಜನಸಾಗರ!

narendra modi ram naam

ನಾವೆಲ್ಲ ಶ್ರೀರಾಮನ ಭಕ್ತರೇ, ಒಂದಲ್ಲ ಒಂದು ರೀತಿ ಶ್ರೀರಾಮನ ಆದರ್ಶ ಪಾಲನೆ ಮಾಡಬೇಕು ಅಂತ ಹೇಳ್ತೀವಿ. ಶ್ರೀರಾಮ ಇವರಾರೋ 4 ಜನಕ್ಕೆ ಆಗೋದಲ್ಲ. ನಮಗೆ ದಶರಥ ರಾಮ ಬೇಕು. ನಮಗೆ ಮೋದಿ ರಾಮ ಬೇಕಾಗಿಲ್ಲ. ನಮಗೆ ಈ ದೇಶವನ್ನು ರಾಮ ರಾಜ್ಯ ಮಾಡಿದ ದಶರಥ ರಾಮ ಬೇಕೆ ಹೊರತು ರಾಮ ಹೆಸರು ಹೇಳಿಕೊಂಡು ಒಡೆದಾಳುವ ನೀತಿ ಆಚರಣೆ ಮಾಡೋರು ಬೇಕಿಲ್ಲ ಎಂದರು. ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ, ಇಂದಿನಿಂದ ಹೊಸ ಯುಗ ಉದಯವಾಗಿದೆ: ನರೇಂದ್ರ ಮೋದಿ

ಬಾಲರಾಮನ ಪ್ರಾಣಪ್ರತಿಷ್ಠೆ ಸಂಪನ್ನ:
ಅಯೋಧ್ಯೆಯ ರಾಮಮಂದಿರದಲ್ಲಿ ಸೋಮವಾರ ಬಾಲರಾಮನ ಪ್ರಾಣಪ್ರತಿಷ್ಠೆ ಶಾಸ್ತ್ರೋಕ್ತವಾಗಿ ನೆರವೇರಿತು. ಸರಿಯಾಗಿ ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿನ್‌ ಲಗ್ನದಲ್ಲಿ (ಅಭಿಜಿಬ್‌ ಅಂದ್ರೆ ʻವಿಜಯಶಾಲಿʼ ಎಂದರ್ಥ) ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು. ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿತು. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸಿಎಂ ಯೋಗಿ ಆದಿತ್ಯನಾಥ್‌, ಗುಜರಾತ್‌ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ ಮೊದಲಾದವರು ಉಪಸ್ಥಿತರಿದ್ದರು. ದೇವಾಲಯ ಆವರಣದಲ್ಲಿ ಸರಿಸುಮಾರು 8 ಸಾವಿರ ಅತಿಥಿಗಳು ನೆರೆದಿದ್ದರು.

Share This Article