ಬಳ್ಳಾರಿ: ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಬೇಡ. ಕರ್ನಾಟಕದಲ್ಲಿ ಕನ್ನಡವೇ ಸೌರ್ವಭಾಮ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿರುವ ಸಚಿವ ಜಿಟಿ ದೇವೇಗೌಡರು, ಹಂಪಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರನ್ನು ಪ್ರಶ್ನೆ ಮಾಡಿದ್ದಾರೆ.
ಹಂಪಿ ವಿವಿಯಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಅವರು, ನಿಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಿದ್ರೆ ಆಯ್ತಾ?. ಸರ್ಕಾರಿ ಶಾಲೆಗೆ ಬರುವ ಮಕ್ಕಳ ಸ್ಥಿತಿ ಏನಾಗಬೇಕು ಎಂದು ಪ್ರಾಧ್ಯಾಪಕರನ್ನು ಪ್ರಶ್ನೆ ಮಾಡಿದರು.
ಸಿದ್ದರಾಮಯ್ಯ ಅವರಿಗೆ ಇಂಗ್ಲಿಷ್ ಮೇಲೆ ಇರುವ ವ್ಯಾಮೋಹದ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದರ ಬೆನ್ನಲ್ಲೇ ಉನ್ನತ ಶಿಕ್ಷಣ ಸಚಿವರು ಇಂಗ್ಲಿಷ್ ಪ್ರೇಮದ ಬಗ್ಗೆ ಪ್ರಶ್ನೆ ಮಾಡಿ ಹಳ್ಳಿಗಳಲ್ಲಿನ, ಬಡ ಮಕ್ಕಳ ಸ್ಥಿತಿಯನ್ನು ಪ್ರಸ್ತಾಪ ಮಾಡಿ ಟಾಂಗ್ ನೀಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಪ್ರಾಧ್ಯಾಪರ ಬಗ್ಗೆಯೂ ಅಸಮಾಧಾನ ಹೊರಹಾಕಿದ ಅವರು, ಲಕ್ಷಗಟ್ಟಲೆ ಸಂಬಳ ತೆಗೆದುಕೊಳ್ಳುತ್ತೀರಾ. ನೀವು ಕಲಿತಿದ್ದನ್ನು ಮಕ್ಕಳಿಗೆ ಕಲಿಸ್ರಪ್ಪಾ. ಶಿಕ್ಷಕ ವೃತ್ತಿ ಸಂಬಳಕ್ಕಾಗಿ ಮಾಡೋದಲ್ಲ. ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಕೆಲಸವಾಗಬೇಕಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಸಮ್ಮಿಶ್ರ ಸರ್ಕಾರದ ಅಸಮಾಧಾನದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕಾಂಗ್ರೆಸ್ ಶಾಸಕ ರಮೇಶ್ ಅವರಿಗೆ ಸದ್ಯ ಸಿಟ್ಟು, ಕೋಪವಿದೆ. ಅದನ್ನು ಶಮನ ಮಾಡುತ್ತೇವೆ. ಒಂದೇ ಪಕ್ಷದ ಸರ್ಕಾರವಿದ್ದಾಗಲೇ ಸಣ್ಣಪುಟ್ಟ ತೊಂದರೆ ಇರುತ್ತವೆ. ಸಮ್ಮಿಶ್ರ ಸರ್ಕಾರದಲ್ಲಿರುವ ಸಮಸ್ಯೆ ಬಗೆಹರಿಸುತ್ತೇವೆ. ಅದೆಲ್ಲವನ್ನು ಕುಮಾರಸ್ವಾಮಿ, ಎಚ್‍ಡಿ ದೇವೇಗೌಡ, ಸಿದ್ದರಾಮಯ್ಯ, ರಾಹುಲ್ ಗಾಂಧಿ ಬಗೆಹರಿಸುತ್ತಾರೆ ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv