ಚಿತ್ರದುರ್ಗ: ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್. ಆಂಜನೇಯ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರಗೆ ದಾಖಲಿಸಲಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿರಂತರ ಪ್ರಚಾರದಲ್ಲಿ ತೊಡಗಿರುವ ಸಚಿವ ಆಂಜನೇಯ ಅವರು ತೀವ್ರ ಬಿಸಿಲಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದ್ರು ಇಂದು ಚಿತ್ರದುರ್ಗದಲ್ಲಿ ಪ್ರಚಾರ ಕಾರ್ಯ ನಡೆಸಲು ಆಗಮಿಸಿದ್ದ ಅವರು ಸುಸ್ತಾಗಿ ಕುಸಿದು ಬಿದಿದ್ದಾರೆ.
ಆಂಜನೇಯ ಅವರಿಗೆ ತಕ್ಷಣ ಸ್ಥಳದಲ್ಲಿದ್ದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಬಳಿಕ ಪಕ್ಷದ ಕಾರ್ಯಕರ್ತರು ಅವರನ್ನು ದಾವಣಗೆರೆಯ ಎಸ್‍ಎಸ್ ನಾರಾಯಣ ಹೃದಯಾಲಯಕ್ಕೆ ದಾಖಲಿಸಿದ್ದಾರೆ.
ಸದ್ಯ ಆಂಜನೇಯ ಅವರಿಗೆ ಚಿಕಿತ್ಸೆ ಮುಂದುವರೆದಿದೆ. 24 ಗಂಟೆಗಳ ಕಾಲ ವೈದ್ಯರ ನಿಗಾದಲ್ಲಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಚಿವರ ಆರೋಗ್ಯ ಹದಗೆಟ್ಟ ಕಾರಣ ಆಂಜನೇಯ ಅವರ ಕುಟುಂಬ ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಆತಂಕ ಉಂಟಾಗಿದೆ.