ಮಂಡ್ಯ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಏನ್ ಪ್ರಿಂಟ್ ಮಾಡುವ ಮಿಷನ್ ಇಟ್ಟಿದ್ದಾರಾ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು, ಕಬ್ಬು ಬೆಳೆಗಾರರ ಹೋರಾಟದ ಕುರಿತು ವ್ಯಂಗ್ಯವಾಗಿ ಮಾತನಾಡಿದ್ದಾರೆ.
ನಗರದಲ್ಲಿ ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟದ ಕುರಿತು ಮಾತನಾಡಿದ ಅವರು, ಎಲ್ಲದಕ್ಕೂ ಸಿಎಂ ಕುಮಾರಸ್ವಾಮಿ ಅವರನ್ನೇ ಹಿಡಿದುಕೊಂಡರೆ ಹೇಗೆ? ಕಬ್ಬು ಬೆಳೆಗಾರರಿಗೆ ಸಮಸ್ಯೆ ಇರುವುದು ರಾಷ್ಟ್ರಕ್ಕೆ ಗೊತ್ತಿದೆ. ರೈತರನ್ನು ಸಂಕಷ್ಟಕ್ಕೆ ಬಿಡಬಾರದು ಹಾಗೇ ಕಾರ್ಖಾನೆಗಳ ಬಗ್ಗೆ ಕೂಡ ಯೋಚಿಸಬೇಕು. ಪ್ರತಿಭಟನಕಾರರು ಕಾರ್ಖಾನೆ ಸುಡುವುದು, ಕಬ್ಬು ಪೂರೈಕೆ ತಡೆಯುವುದು ಸರಿಯಲ್ಲ ಎಂದು ಸಚಿವರು ಹೇಳಿದರು.
Advertisement
Advertisement
ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡುವ ಕುರಿತು ಕೇಂದ್ರ ಸರ್ಕಾರ ಮಧ್ಯೆ ಪ್ರವೇಶ ಮಾಡಬೇಕು. ಈ ಪ್ರತಿಭಟನೆ ಹಿಂದೆ ಯಾರು ಇದ್ದಾರೆ ಎನ್ನುವುದು ನಮಗೆ ಗೊತ್ತಿದೆ. ಎಲ್ಲದಕ್ಕೂ ರಾಜ್ಯ ಸರ್ಕಾರವನ್ನು ದೂರುವುದು ಸರಿಯಲ್ಲ. ರಾಜ್ಯ ಸರ್ಕಾರದ ಬಳಿ ನೋಟ್ ಮುದ್ರಣ ಮಾಡುವ ಯಂತ್ರ ಇದೆಯೇ ಎಂದು ರೇವಣ್ಣ ಪ್ರಶ್ನೆ ಮಾಡಿದರು. ಇದನ್ನು ಓದಿ: ನಾಲ್ಕು ವರ್ಷದಿಂದ ಎಲ್ಲಿ ಮಲಗಿದ್ದೆ- ಪ್ರತಿಭಟನಾ ನಿರತ ಮಹಿಳೆಗೆ ಏಕವಚನದಲ್ಲಿ ಸಿಎಂ ಕಿಡಿ
Advertisement
ಇದೇ ವೇಳೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಸಿಎಂ ಆಗಬೇಕು ಎನ್ನುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಯಾರು ಸಿಎಂ ಆಗಬೇಕು ಎನ್ನುವುದು ನನಗೆ ಸಂಬಂಧವಿಲ್ಲದ ವಿಚಾರ. ಅದು ಏನಿದ್ದರೂ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಇದು ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬಿಟ್ಟ ವಿಚಾರ ಎಂದ ಸಚಿವರು, ನಾನು ಶಾಸಕ ಶ್ರೀರಾಮುಲು ಬಗ್ಗೆ ಮಾತನಾಡಲ್ಲ. ಅವರೊಬ್ಬ ದೊಡ್ಡ ನಾಯಕರು ಎಂದು ವ್ಯಂಗ್ಯವಾಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews