Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಹೆಚ್‌ಡಿಕೆ – ಸಂಸದರ ವೇತನವನ್ನೇ ಕೊಟ್ಟ ಕೇಂದ್ರ ಸಚಿವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಹೆಚ್‌ಡಿಕೆ – ಸಂಸದರ ವೇತನವನ್ನೇ ಕೊಟ್ಟ ಕೇಂದ್ರ ಸಚಿವ

Districts

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಹೆಚ್‌ಡಿಕೆ – ಸಂಸದರ ವೇತನವನ್ನೇ ಕೊಟ್ಟ ಕೇಂದ್ರ ಸಚಿವ

Public TV
Last updated: December 6, 2025 4:34 pm
Public TV
Share
2 Min Read
HD Kumaraswamy
SHARE

– ʻನಿಮ್ಮ ಕಷ್ಟಗಳಿಗೆ ಸ್ಪಂದಿಸಿ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆʼ

ಮಂಡ್ಯ: ಸುಮಾರು 15 ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ (Mysugar School) ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು, ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ.

ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ. ಮಂಡ್ಯ ನಗರದ ಐತಿಹಾಸಿಕ ಮೈಷುಗರ್ ಶಾಲೆಯ ಶಿಕ್ಷಕರು ಹಲವಾರು ತಿಂಗಳಿನಿಂದ ವೇತನವಿಲ್ಲದೆ ಸಂಕಷ್ಟದಲ್ಲಿ ಸಿಲುಕಿದ್ದರು. ಬಾಕಿ ವೇತನಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದ್ದೆ. ಅದರಂತೆಯೇ ಸಂಸದನಾಗಿ ನನಗೆ ಸಿಗುವ ವೇತನವನ್ನೇ ಶಿಕ್ಷಕರಿಗೆ ವೇತನಕ್ಕಾಗಿ ನೀಡಿದ್ದೇನೆ. ₹19,94,200 ಮೊತ್ತದ ಚೆಕ್ ಅನ್ನು… pic.twitter.com/sKrGX4daG0

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 6, 2025

ಈ ಮೊದಲು ನೀಡಿದ್ದ ಭರವಸೆಯಂತೆ ಶನಿವಾರ ಬೆಳಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, ಇಂದು 19,94,200 ಮೊತ್ತದ ಚೆಕ್‌ ಅನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಶಿಕ್ಷಕರು ಸಚಿವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಸ್ಪಂದಿಸಿದ ಸಚಿವರು, ವೇತನವಿಲ್ಲದೆ ಕೆಲಸ ಮಾಡುವುದು ಕಷ್ಟ. ನೀವು ನೋವು ನನಗೆ ಅರ್ಥವಾಗಿದೆ. ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಮಾತು ಕೊಟ್ಟಿದ್ದೆ. ನಿಮಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಗ್ಯಾರಂಟಿಗೆ ಕೋಟಿಗಟ್ಟಲೇ ಖರ್ಚು ಮಾಡ್ತಿರೋದು ಸಮಾನತೆ ತರಲು: ಸಿದ್ದರಾಮಯ್ಯ

HD Kumaraswamy 2

ಇದು ಐತಿಹಾಸಿಕ ಶಾಲೆ, ಮಂಡ್ಯದ ಇತಿಹಾಸದಲ್ಲಿ ಈ ಶಾಲೆಗೂ ಒಂದು ಸ್ಥಾನವಿದೆ. ಹೀಗಾಗಿ ಶಾಲೆ ಸಂಕಷ್ಟಕ್ಕೆ ಸಿಲುವುದು ನನಗೆ ಇಷ್ಟವಿಲ್ಲ. ಈ ಶಾಲೆಯನ್ನು ಉಳಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೂ ಮನವಿ ಮಾಡುತ್ತೇನೆ. ಪಿಯುಸಿವರೆಗೆ ಈ ಶಾಲೆಯಲ್ಲಿ ಶಿಕ್ಷಣ ದೊರೆಯಲಿ. ನಾನು ಕೂಡ ಶಾಲೆಯ ಉಳಿವಿಗೆ ಕೈ ಜೋಡಿಸುತ್ತೇನೆ. ಆದಿಚುಂಚನಗಿರಿ ಶ್ರೀಗಳೊಂದಿಗೂ ಈ ಬಗ್ಗೆ ಮಾತಾಡಿದ್ದೇನೆ. ಒಂದೇ ರಾತ್ರಿಯಲ್ಲಿ ಅಭಿವೃದ್ಧಿ ಮಾಡುತ್ತೇನೆ ಎಂದು ನಾನು ಹೇಳಲ್ಲ. ಹಂತ ಹಂತವಾಗಿ ಶಾಲೆಯ ಅಭಿವೃದ್ಧಿ ಮಾಡೋಣ. ಈ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲಿ ಎಂದು ಕೇಳುತ್ತೇನೆ. ಮಂಡ್ಯದಲ್ಲಿ ಮೈಶುಗರ್ ಶಾಲೆಯೇ ನಂ.1 ಶಾಲೆ ಆಗಿರಬೇಕು ಎಂಬುದು ನನ್ನ ಆಶಯವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಗೋವು ಸಂರಕ್ಷಣೆ ಕಾಯ್ದೆ ತಿದ್ದುಪಡಿ; ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿ

ಶಿಕ್ಷಕರ ಕಷ್ಟ ತಿಳಿದು ನಾನು ಬಹಳ ನೊಂದಿದ್ದೆ. 15 ತಿಂಗಳಿಂದ ಸಂಬಳ ಇಲ್ಲದೇ ಕೆಲಸ ಮಾಡುವುದು ಎಂದರೆ ಸುಲಭವಲ್ಲ. ಆ ಸಂಕಷ್ಟದ ಕಾಲದಲ್ಲಿಯೂ ಅವರು ಮಕ್ಕಳಿಗೆ ವಿದ್ಯೆ ಕಲಿಸಿದ್ದಾರೆ. ಹೀಗಾಗಿ ಎಲ್ಲಾ ಶಿಕ್ಷಕರಿಗೆ ಅಭಿನಂದನೆ ಹೇಳುತ್ತೇನೆ. ಶಾಲೆ ಅಭಿವೃದ್ಧಿ ಎಲ್ಲರ ಕರ್ತವ್ಯ. ನನ್ನ ಕೈಲಾದದ್ದನ್ನು ನಾನು ಮಾಡುತ್ತೇನೆ. ಮಕ್ಕಳ ಅನುಕೂಲಕ್ಕೆ ಎರಡು ಶಾಲಾ ಬಸ್ ಬೇಕು ಎಂದು ಮನವಿ ಮಾಡಿದ್ದಾರೆ. ಮೈಶುಗರ್ ಶಾಲೆಯಲ್ಲಿ ಎಲ್‌ಕೆಜಿಯಿಂದ ಪಿಯುವರೆಗೆ ಉಚಿತ ಶಿಕ್ಷಣ ನೀಡಲು ಹೇಳಿದ್ದೇನೆ. ಈ ಬಗ್ಗೆ ಚುಂಚನಗಿರಿ ಶ್ರೀಗಳ ಬಳಿ ಮನವಿ ಮಾಡಿದ್ದೇನೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಂಸತ್‌ ಕಲಾಪ ಮುಗಿದ ಬಳಿಕ ಶ್ರೀಗಳ ಮಾರ್ಗದರ್ಶನದಲ್ಲಿ ಚರ್ಚೆ ಮಾಡುತ್ತೇವೆ. ಕಾಂಗ್ರೆಸ್ ನಾಯಕರಿಗೂ ಈ ಬಗ್ಗೆ ಹೇಳುತ್ತೇನೆ. ಶಾಲೆ ವಿಷಯದಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಮೈಶುಗರ್ ಶಾಲೆ ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೆಚ್‌ಡಿಕೆ ಪ್ರತಿಪಾದಿಸಿದರು.  ಇದನ್ನೂ ಓದಿ: ಕೇವಲ 100 ರೂ.ಗೆ ಹಾಟ್‌ಸ್ಟಾರ್, ಡೇಟಾ ಸೇರಿ ಜಿಯೋ ಸಕತ್ ಬಂಪರ್‌ ಆಫರ್‌

TAGGED:hd kumaraswamyMaishugar SchoolMaishugar School Teachersmandyaಮೈಶುಗರ್‌ ಶಾಲಾ ಶಿಕ್ಷಕರುಮೈಶುಗರ್‌ ಶಾಲೆಹೆಚ್‌.ಡಿ ಕುಮಾರಸ್ವಾಮಿ ಮಂಡ್ಯ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
3 minutes ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
18 minutes ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
46 minutes ago
Supreme Court 1
Court

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್

Public TV
By Public TV
56 minutes ago
gold silver price drop market crash
Latest

ಚಿನ್ನದ ದರ ದಾಖಲೆಯ ಕುಸಿತ – ಏರಿದ್ದ ಚಿನ್ನದ ಬೆಲೆ ದಿಢೀರ್‌ ಇಳಿಕೆಗೆ ಕಾರಣ ಏನು?

Public TV
By Public TV
1 hour ago
AI Image
Bengaluru City

ಮಕ್ಕಳಿಗೆ ಡಿಜಿಟಲ್ ಬಳಕೆ ಹೇಗೆ? – ಶಿಕ್ಷಣ, ಆರೋಗ್ಯ ಇಲಾಖೆ & ನಿಮ್ಹಾನ್ಸ್‌ನಿಂದ ಗೈಡಲೈನ್ಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?