– ನಮ್ಮ ಪಕ್ಷಕ್ಕೆ ಒಟ್ಟು 12 ಸೀಟುಗಳು ಬೇಕು
– ಮೈತ್ರಿಯಾದ್ರೆ 28 ಕ್ಷೇತ್ರಗಳ ಗೆಲವು ಖಚಿತ
ಹಾಸನ: ರಾಷ್ಟ್ರದಲ್ಲಿ ಕೋಮುವಾದಿ ಶಕ್ತಿಗಳನ್ನು ದೂರವಿಡಲು ಕಾಂಗ್ರೆಸ್‍ನೊಂದಿಗೆ ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡರು ಕೈಜೋಡಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಸಮ್ಮತಿ ಇಲ್ಲವೆಂದರೆ ಫ್ರೆಂಡ್ಲಿ ಫೈಟ್ ಮಾಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ನಗರದ ಕೆಡಿಪಿ ಸಭೆ ಬಳಿಕ ಮಾತನಾಡಿದ ಅವರು, ಹಾಸನದ ಕ್ಷೇತ್ರದಿಂದ ಸ್ಪರ್ಧಿಸುವ ಮೊದಲ ಆದ್ಯತೆಯನ್ನು ಎಚ್.ಡಿ.ದೇವೇಗೌಡ ಅವರಿಗೆ ನೀಡಲಾಗುತ್ತದೆ. ಅವರು ಸ್ಪರ್ಧಿಸದಿದ್ದರೆ ಪುತ್ರ ಪ್ರಜ್ವಲ್ ರೇವಣ್ಣ ಕಣಕ್ಕೆ ಇಳಿಯುತ್ತಾರೆ. ಇದನ್ನು ವಿರೋಧಿಸಿ ಕಾಂಗ್ರೆಸ್‍ನವರು ತಮ್ಮ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದರೆ ನಾವೇನು ಮಾಡಲು ಸಾಧ್ಯವಿಲ್ಲ ಎಂದರು.
Advertisement
Advertisement
ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಚಿವರು, ನಮಗೆ 12 ಸೀಟು ನೀಡಬೇಕೆಂದು ಜೆಡಿಎಸ್ ಶಾಸಕರು ಒತ್ತಾಯಿಸಿದ್ದಾರೆ. ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದಾಗ 18 ಲೋಕಸಭಾ ಕ್ಷೇತ್ರಗಳಿಂದ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದರು. ಹೀಗಾಗಿ ನಮಗೆ ಈ ಬಾರಿ 12 ಸೀಟು ಬಿಟ್ಟುಕೊಡುವಂತೆ ಕಾಂಗ್ರೆಸ್ ಹೈಕಮಾಂಡ್‍ಗೆ ತಿಳಿಸಿದ್ದೇವೆ. ಈ ವಿಚಾರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ದೇವೇಗೌಡ ಅವರು ಚರ್ಚೆ ಮಾಡುತ್ತಾರೆ. ಅವರ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.
Advertisement
ರಾಜ್ಯದ 28 ಕ್ಷೇತ್ರಗಳಲ್ಲಿ ಜಯಗಳಿಸುವ ಉದ್ದೇಶವಿದ್ದರೆ ಮೈತ್ರಿಯಾಗಿ ಚುನಾವಣೆ ಎದುರಿಸಬೇಕು. ಎಲ್ಲ ಕ್ಷೇತ್ರಗಳಲ್ಲಿಯೂ ಜಯಗಳಿಸುವ ಮೂಲಕ ಕೋಮುವಾದಿಗಳನ್ನು ದೂರವಿಡಲು ಸಾಧ್ಯವಾಗುತ್ತದೆ ಎಂದು ಹೇಳಿ ಬಿಜೆಪಿಯವರಿಗೆ ಟಾಂಗ್ ಕೊಟ್ಟರು.
Advertisement
ಜಿಲ್ಲೆಯ ಕುಡಿಯು ನೀರಿನ ಸಮಸ್ಯೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಕುಡಿಯುವ ನೀರಿಗೆ ಎಲ್ಲಿಯೂ ಸಮಸ್ಯೆ ಆಗಬಾರದೆಂದು ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸಾಲಮನ್ನಾ ಚೆಕ್‍ಗಳನ್ನು ಆಯಾ ಬ್ಯಾಂಕ್ ಅಧಿಕಾರಿಗಳು ಕೊಡಬೇಕು ಎಂದ ಅವರು, ಜಿಲ್ಲೆಯಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಪ್ರಮುಖ ಕಂಪನಿಗಳು ಸೇರಿದಂತೆ ನೂರು ಕಂಪನಿಗಳು ಬರುತ್ತವೆ ಎಂದರು.
ದೇವರ ಆಶೀರ್ವಾದ ಇದ್ದರೆ ನಾನು ಮುಖ್ಯಮಂತ್ರಿ ಆಗುತ್ತೇನೆಂದು ಸಚಿವ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ನನಗೆ ಜಿಲ್ಲೆಯ ಅಭಿವೃದ್ಧಿಯೇ ಮುಖ್ಯ. ಅದೆಲ್ಲ ನನಗೆ ಗೊತ್ತಿಲ್ಲ ಎಂದ ಸಚಿವರು, ಪ್ರಜ್ವಲ್ ರೇವಣ್ಣ ಸ್ಪರ್ಧೆ ಕುರಿತು ಪಕ್ಷ ತೀರ್ಮಾನ ಮಾಡುತ್ತದೆ. ಸೂರಜ್ ರೇವಣ್ಣ ಚುನಾವಣೆಗೆ ನಿಲ್ಲುವುದಿಲ್ಲ ಹಾಗೂ ಈ ನಿಟ್ಟಿನಲ್ಲಿ ಯಾವುದೇ ಚಿಂತನೆ ಇಲ್ಲ ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv