ಬೆಂಗಳೂರು: ಹೆಚ್‌ಎಂಟಿ ಅಧೀನದಲ್ಲಿರುವ ಅರಣ್ಯ ಭೂಮಿಯನ್ನು(Forest Land) ಹಿಂಪಡೆಯುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಲಾಗಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ (HK Patil) ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್‌ಎಂಟಿ ಅಧೀನದಲ್ಲಿ ಇರುವ ಅರಣ್ಯ ಭೂಮಿ ಹಿಂಪಡೆಯುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಗಿದೆ. ಹೆಚ್‌ಎಂಟಿ ಕಂಪನಿ (HMT Company) ಕೆಲವು ಅರಣ್ಯ ಭಾಗವನ್ನು ಬೇರೆ ಸಂಸ್ಥೆಗಳಿಗೆ ಮಾರಾಟ ಮಾಡಿದೆ. ಸುಮಾರು 160 ಎಕರೆ ಭೂಮಿಯನ್ನು 375 ಕೋಟಿ ರೂ.ಗೆ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳಿಗೆ ಮಾರಾಟ ಮಾಡಿದೆ. ಮಾರಾಟ ಸಂದರ್ಭದಲ್ಲಿ ಅರಣ್ಯ ಇಲಾಖೆ, ಅರಣ್ಯ ಸಚಿವರು ಯಾರಿಂದಲೂ ಅನುಮತಿ ಪಡೆದಿಲ್ಲ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ವಿಶ್ವದ ಪ್ರತಿ ದೇಶದಲ್ಲೂ ನನ್ನದೊಂದು ಮಗು ಇರಬೇಕು – ಅಮೆರಿಕದ ವೀರ್ಯದಾನಿಯ ಹೆಬ್ಬಯಕೆ
180 ಎಕರೆ ಅರಣ್ಯ ಭೂಮಿಯನ್ನು ಇದೀಗ ಮಾರಾಟ ಮಾಡಲು ಹೊರಟಿದ್ದಾರೆ. ಅಲ್ಲದೇ ಮೊದಲೇ 160 ಎಕರೆ ಮಾರಾಟ ಆಗಿದ್ದು, ಅದೂ ಅರಣ್ಯ ಭೂಮಿ ಡಿನೋಟೀಫೈ ಆಗಿಲ್ಲ. ಆದಾಗ್ಯೂ ಮಾರಾಟ ಮಾಡಿರುವುದು ಕಂಡುಬಂದಿದೆ. ಈ ಪ್ರಶ್ನಾರ್ಹ ಭೂಮಿಯನ್ನು ಡಿನೋಟಿಫೈ ಮಾಡುವುದಕ್ಕೆ ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿತ್ತು. 2015ರಲ್ಲಿ ಸಮಸ್ಯೆ ಬಗೆಹರಿಸಲು ಉನ್ನತ ಮಟ್ಟದ ಸಮಿತಿ ಕೂಡ ರಚಿಸಲಾಗಿತ್ತು. ಅರಣ್ಯ ಭೂಮಿ ಡಿನೋಟಿಫೈ ಮಾಡಿದರೆ ರಾಜ್ಯಕ್ಕೆ ಭಾರೀ ಆರ್ಥಿಕ ನಷ್ಟ ಉಂಟಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೀದರ್ ದರೋಡೆಯ ಸುತ್ತ ಅನುಮಾನದ ಹುತ್ತ – ಇದು ಇದು ಪ್ರೀ ಪ್ಲಾನ್ ಎಂದ ಮೃತನ ಸಹೋದರಿ
ಡಿನೋಟಿಫೈ ಮಾಡಿದ್ರೆ ಬೆಂಗಳೂರಿನ ಶ್ವಾಸಕೋಶದ ಸ್ಥಳ ಕಳೆದುಕೊಳ್ಳುತ್ತದೆ. ಗೆಚ್‌ಎಂಟಿಗೆ ಅರಣ್ಯ ಭೂಮಿ ನೀಡಿದ್ದ ಉದ್ದೇಶ ಈಡೇರಿಲ್ಲ. ಹಾಗಾಗಿ ಅರಣ್ಯ ಭೂಮಿಯನ್ನು ಹಿಂಪಡೆಯುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: 2ನೇ ಹೆಂಡ್ತಿ ಬಿಟ್ಟು ತನ್ನ ಬಳಿಯೇ ಇರುವಂತೆ ಒತ್ತಾಯ – ಮೊದಲ ಹೆಂಡ್ತಿಯನ್ನೇ ಹತ್ಯೆಗೈದ ಗಂಡ