Connect with us

Chamarajanagar

ಸಿಎಂ ಬದಲಾವಣೆ ದೂರದ ಮಾತು, ಎರಡೂವರೆ ವರ್ಷ ಬಿಎಸ್‍ವೈ ಸಿಎಂ: ಶೆಟ್ಟರ್

Published

on

– ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ

ಚಾಮರಾಜನಗರ: ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಬಿ.ಎಸ್. ಯಡಿಯೂರಪ್ಪನವರೇ ಪೂರ್ಣಾವಧಿ ಪೂರೈಸುತ್ತಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಚಾಮರಾಜನಗರ ತಾಲೂಕಿನ ಕೆಲ್ಲಂಬಳ್ಳಿ-ಬದನಗುಪ್ಪೆ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ದೂರದ ಮಾತು. ಈ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರಣ್ ಸಿಂಗ್ ಸಹ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ನಾನೂ ಅದನ್ನೇ ಸ್ಪಷ್ಟಪಡಿಸುತ್ತಿದ್ದೇನೆ. ಇನ್ನೂ ಎರಡೂವರೆ ವರ್ಷಗಳ ಕಾಲ ಯಡಿಯೂರಪ್ಪನವರೇ ಮುಖ್ಯಮಂತ್ರಿಗಳಾಗಿರುತ್ತಾರೆ. ರಾಜ್ಯ ಉಸ್ತುವಾರಿಯವರೇ ಹೇಳಿದ ಮೇಲೆ ಯಡಿಯೂರಪ್ಪ ಬದಲಾವಣೆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರೇಣುಕಾಚಾರ್ಯ ನಡುವೆ ನಡೆಯುತ್ತಿರುವ ಟಾಕ್ ವಾರ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ನನಗೆ ಸಂಬಂಧಿಸಿದ ವಿಚಾರವಲ್ಲ. ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ಈ ವಿಚಾರ ಬಗೆಹರಿಸುತ್ತಾರೆ. ಎಲ್ಲವೂ ಸರಿಹೋಗಲಿದೆ. ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಪಕ್ಷದ ವರಿಷ್ಠರರ ಜೊತೆ ಚರ್ಚಿಸಿ ಅವರು ನಿರ್ಧರಿಸುತ್ತಾರೆ ಎಂದು ಹೇಳಿದರು.

ಯಾವಾಗ ಹಣ ಬರುತ್ತೆ, ಕೆಲಸ ಯಾವಾಗ ಕೊಡ್ತೀರಾ?
ಚಾಮರಾಜನಗರ ತಾಲೂಕಿನ ಬದನಗುಪ್ಪೆ ಕೆಲ್ಲಂಬಳ್ಳಿ ಬಳಿಯ ಕೈಗಾರಿಕಾ ಪ್ರದೇಶಕ್ಕೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿದ್ದರು. ಈ ವೇಳೆ ನಿರುದ್ಯೋಗಿ ಯುವಕನೊಬ್ಬ ಸಚಿವ ಶೆಟ್ಟರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾನೆ. ಕೆಲ್ಲಂಬಳ್ಳಿ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಯುವಕನೊಬ್ಬ ಪ್ರಶ್ನೆಗಳ ಸುರಿಮಳೆಗೈದಿದ್ದಾನೆ. ನಮ್ಮ ಜಮೀನನ್ನು ಖರೀದಿ ಮಾಡಲಾಗಿದೆ. ಜಮೀನು ಕಳೆದುಕೊಂಡು ನಾವು ನಿರುದ್ಯೋಗಿಗಳಾಗಿದ್ದೇವೆ. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಮಾತ್ರ ಕೆಲಸ ಕೊಡುತ್ತಿಲ್ಲ. ಬೇರೆ ಜಿಲ್ಲೆ, ರಾಜ್ಯದವರಿಗೂ ಕೆಲಸ ಕೊಡಲಾಗುತ್ತಿದೆ. ನಮಗೆ ಯಾವಾಗ ಕೆಲಸ ಕೊಡುತ್ತೀರಾ ಎಂದು ಸಚಿವ ಶೆಟ್ಟರ್‍ಗೆ ಪ್ರಶ್ನೆ ಮಾಡಿದ್ದಾನೆ.

Click to comment

Leave a Reply

Your email address will not be published. Required fields are marked *

www.publictv.in