BelgaumDistrictsKarnatakaLatestMain Post

ಸಚಿವ ಜೆ.ಸಿ ಮಾಧುಸ್ವಾಮಿಗೆ ಆನೆಯಿಂದ ಮಾಲಾರ್ಪಣೆ

Advertisements

ಚಿಕ್ಕೋಡಿ(ಬೆಳಗಾವಿ): ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹಾಗೂ ಸಚಿವ ಜೆ.ಸಿ ಮಾಧುಸ್ವಾಮಿ ಆನೆಯಿಂದ ಮಾಲಾರ್ಪಣೆ ಮಾಡಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ಕೆರೆ ನಿರ್ಮಾಣ ಶಂಕು ಸ್ಥಾಪನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹಾಗೂ ಸಚಿವ ಜೆ ಸಿ ಮಾಧುಸ್ವಾಮಿ ಅವರಿಗೆ ಆನೆಯಿಂದ ಮಾಲಾರ್ಪಣೆ ಮಾಡಲಾಯಿತು. ಇದನ್ನೂ ಓದಿ: ಕೆನಡಾ ಬಳಿಕ ಪಂಜಾಬ್‍ನಲ್ಲಿ ಗಾಂಧಿ ಪ್ರತಿಮೆ ಧ್ವಂಸ

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಗೈರಾಗಿದ್ದರು. ಅಲ್ಲದೆ ಕಾರ್ಯಕ್ರಮದ ಬಹುತೇಕ ಸ್ವಾಗತ ಫಲಕಗಳಲ್ಲಿ ಶಾಸಕ ಮಹೇಶ ಕುಮಟಳ್ಳಿ ಭಾವಚಿತ್ರ ಮಾಯವಾಗಿತ್ತು. ಈ ಮೂಲಕ ಅಥಣಿ ಬಿಜೆಪಿಯಲ್ಲಿ ಅಸಮಧಾನದ ಹೊಗೆಯಾಡುತ್ತಿರುವುದು ಬೆಳಕಿಗೆ ಬಂದಿದೆ.

Live Tv

Leave a Reply

Your email address will not be published.

Back to top button