ಬೆಂಗಳೂರು: ಸಚಿವ ರಾಜಣ್ಣ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮೇಲೆ ಪ್ರೀತಿ ಇರುವುದರಿಂದ ಅವರಿಗೆ ಒಳ್ಳೆಯದಾಗಲಿ ಎಂದು ರಾಜಣ್ಣ ಮಾತನಾಡುತ್ತಿದ್ದಾರೆ ಅಷ್ಟೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಂಸದ, ಶಿವಕುಮಾರ್ ಅವರಿಗೆ ಒಳ್ಳೆಯದಾಗಲಿ ಎಂಬ ಭಾವನೆ ಎಲ್ಲರಿಗೂ ಇದೆ. ರಾಜಣ್ಣ ಅವರಿಗೆ ಡಿ.ಕೆ.ಶಿವಕುಮಾರ್ ಅವರ ಮೇಲೆ ಪ್ರೀತಿ ಇದೆ. ಅದಕ್ಕೆ ಮಾತನಾಡ್ತಾರೆ. ಕಲ್ಲಿಗೆ ಏಟು ಬಿದ್ದಾಗಲೇ ಶಿಲೆ ಆಗುವುದು, ತಟ್ಟುತ್ತಿದ್ದಾರೆ ಎಂದು ತಿಳಿಸಿದ್ದಾರೆ.
Advertisement
ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬು ಇದೆಯಾ, ಇಲ್ವಾ ಅನ್ನೋದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೀಗೆ ಬಹಿರಂಗವಾಗಿ ಮಾತನಾಡುವುದರಿಂದ ಡ್ಯಾಮೇಜ್ ಆಗುತ್ತೋ ಇಲ್ವೋ ಅನ್ನೋದನ್ನ ಸಿಎಂರನ್ನ ಕೇಳಿ, ಎಐಸಿಸಿ ಅಧ್ಯಕ್ಷರನ್ನು ಕೇಳಿ, ರಾಜ್ಯ ಉಸ್ತುವಾರಿಯನ್ನು ಕೇಳಿ. ಯಾರಿಗಾದರೂ ಒಳ್ಳೆಯದಾಗಬೇಕು ಅಂದ್ರೆ ಸಾಕಷ್ಟು ಜನರ ಆಶೀರ್ವಾದ ಬೇಕು. ಆಶೀರ್ವಾದ ಮಾಡ್ತಿದ್ದಾರೆ, ಪ್ರಸಾದ ಕೊಡ್ತಿದಾರೆ. ಪ್ರಸಾದ ಜಾಸ್ತಿ ಆದರೂ ಹೊಟ್ಟೆ ನೋವು ಬರಲ್ಲ. ನಾವು ಹಳ್ಳಿಯಿಂದ ಬಂದವರು ಎಂದಿದ್ದಾರೆ.
Advertisement
ಪವರ್ ಶೇರಿಂಗ್ ಬಗ್ಗೆ ನನಗೆ ಏನು ಮಾಹಿತಿ ಇಲ್ಲ. ನಾನು ಸಾಮಾನ್ಯ ಕಾರ್ಯಕರ್ತ. ಅಧಿಕಾರ ಹಂಚಿಕೆ ಬಗ್ಗೆ ಈಗ ಚರ್ಚೆ ಯಾಕೆ? ಕುರ್ಚಿ ಖಾಲಿ ಇಲ್ಲ. ಚರ್ಚೆ ಹುಟ್ಟು ಹಾಕಿದವರು ಯಾರು? ಎಂದಿದ್ದಾರೆ. ಕೆಎಂಎಫ್ ಅಧ್ಯಕ್ಷ ಸ್ಥಾನ ಸೇರಿದಂತೆ ಯಾವುದೇ ಹುದ್ದೆಯ ಆಕಾಂಕ್ಷಿ ನಾನಲ್ಲ. ಜನ ನನ್ನನ್ನ ಸೋಲಿಸಿದ್ದಾರೆ. ರೆಸ್ಟ್ ಮಾಡ್ತಿದ್ದೀನಿ ಎಂದು ತಿಳಿಸಿದ್ದಾರೆ.