ಬೆಂಗಳೂರು: ಸರ್ಕಾರ ಬದುಕಿದೆಯಾ, ಸತ್ತಿದಿಯಾ ಎಂಬುವುದನ್ನು ಇಂದು ತೋರಿಸುತ್ತೇವೆ. ಕಾನೂನು ಉಲ್ಲಂಘನೆ ಮಾಡಿದರೇ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಎಚ್ಚರಿಕೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಸಭೆ ಕರೆದಿದ್ದಾರೆ. ಇದೊಂದು ವಿಶೇಷ ಪ್ರಕರಣದ ಎಂಬಂತೆ ಕಾಂಗ್ರೆಸ್ ಸ್ಥಿತಿ ನಿರ್ಮಾಣ ಮಾಡಿದೆು ಎಚ್ಚರಿಸಿದರು.
ಕಾಂಗ್ರೆಸ್ ಅವರು ಮಾಡುತ್ತಿರುವುದು ಬೀದಿ ನಾಟಕ. ಇದನ್ನು ಖಂಡಿಸುತ್ತೇವೆ. ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಇದೆ. ಈ ರೀತಿ ಪಾದಯಾತ್ರೆ ಮಾಡಿದರೆ ಕೊರೊನಾ ಇನ್ನೂ ಜಾಸ್ತಿ ಆಗುತ್ತದೆ. ಕಾಂಗ್ರೆಸ್ ಪಾದಯಾತ್ರೆ ಬೀದಿ ನಾಟಕ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ
ಚುನಾವಣೆಗೋಸ್ಕರ ಕಾಂಗ್ರೆಸ್ ಈ ಬೀದಿ ನಾಟಕ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್‍ನವರು ಕಾವೇರಿಗೆ ಮಾಡುತ್ತಿರುವ ಅಪಮಾನವಾಗಿದೆ. ಬಿಬಿಎಂಪಿ ಚುನಾವಣೆ ಗುರಿಯಾಗಿಟ್ಟುಕೊಂಡು ಬೀದಿ ನಾಟಕ ಮಾಡುತ್ತಿದ್ದಾರೆ. ಇದಕ್ಕೆ ನನ್ನ ದಿಕ್ಕಾರವಿದೆ ಎಂದು ಖಂಡಿಸಿದರು. ಇದನ್ನೂ ಓದಿ: ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆ ರಾಜಕೀಯ ಪ್ರೇರಿತ: ಬೊಮ್ಮಾಯಿ
ಕಾಂಗ್ರೆಸ್ ಐದು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದರು? ಮೇಕೆದಾಟುಗೆ ಸಂಬಂಧಿಸಿ ಏನೇ ಒಳ್ಳೆಯ ಕೆಲಸ ಆಗಬೇಕು ಅಂದರೂ ಅದು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ ಎಂದ ಅವರು, ರಾಜ್ಯ ಸರ್ಕಾರ ಕೋವಿಡ್ ಪ್ರಕರಣಗಳ ಕುರಿತು ಸುಳ್ಳು ವರದಿ ಕೊಡುತ್ತಿದೆ ಎಂದು ಕಾಂಗ್ರೆಸ್‍ನವರು ಆರೋಪಿಸುತ್ತಿದ್ದಾರೆ. ಹಾಗಾದರೆ ಮಹಾರಾಷ್ಟ್ರದಲ್ಲಿ ಬರುತ್ತಿರುವ ಕೇಸ್‍ಗಳು ಸುಳ್ಳಾ ಎಂದು ಡಿಕೆಶಿಗೆ ಟಾಂಗ್ ನೀಡಿದರು.