– ಗೋಹತ್ಯೆ ನಿಷೇಧ ಕಾಯ್ದೆ ರದ್ದತಿಯ ಸುಳಿವು
ಮೈಸೂರು: ಗೋಹತ್ಯೆ ವಿಚಾರವಾಗಿ ಪಶುಸಂಗೋಪನಾ ಸಚಿವ ವೆಂಕಟೇಶ್ (Minister Venkatesh) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Advertisement
ಗೋ ಹತ್ಯೆ ನಿಷೇಧ ಕಾಯ್ದೆ (Cow Slaughter Prohibition Act) ರದ್ದುಗೊಳಿಸುವ ವಿಚಾರ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಮ್ಮೆ, ಕೋಣಗಳನ್ನು ಕಡಿಯುವುದಾದರೇ ಹಸುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಯಾರಾದ್ರೂ ಲಂಚ ಕೇಳಿದ್ರೆ ನೇರವಾಗಿ ನನಗೆ ಪತ್ರ ಬರೆಯಿರಿ, ಒದ್ದು ಒಳಗೆ ಹಾಕಿಸ್ತೀನಿ: ಡಿಕೆಶಿ
Advertisement
Advertisement
ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
Advertisement
ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್ (Amul) ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಮದು ಸಚಿವರು ಭರವಸೆ ನೀಡಿದರು.