ಬೆಂಗಳೂರು: ಅರ್ಹರ ಬಿಪಿಎಲ್, ಎಪಿಎಲ್ ಕಾರ್ಡ್‌ಗಳು ರದ್ದಾಗಿದ್ದರೆ, ಮರು ಅರ್ಜಿ ಸಲ್ಲಿಕೆಗೆ ವ್ಯವಸ್ಥೆ ಮಾಡ್ತೀವಿ ಎಂದು ಸಚಿವ ಕೆ.ಹೆಚ್. ಮುನಿಯಪ್ಪ (KH Muniyappa) ಹೇಳಿದ್ದಾರೆ.
ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿಂದು ನಡೆದ ಸಭೆಯಲ್ಲಿ ಸಚಿವ ರಾಜಣ್ಣ, ಪರಮೇಶ್ವರ್, ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಹೆಚ್ ಮುನಿಯಪ್ಪ ಸೇರಿದಂತೆ ಹಲವು ಸಚಿವರು ಪಾಲ್ಗೊಂಡಿದ್ದರು. ಉನ್ನತ ಮಟ್ಟದ ಸಭೆಯಲ್ಲಿ ವಕ್ಫ್ ವಿವಾದ, ರೇಷನ್ ಕಾರ್ಡ್ (Ration Card) ವಿವಾದ, ಗ್ಯಾರಂಟಿ ಗದ್ದಲ, ಆಪರೇಷನ್ ಕಮಲ ಆರೋಪ-ಪ್ರತ್ಯಾರೋಪ, ಅಧಿವೇಶನ, ಉಪಚುನಾವಣೆ, ಸಚಿವರ ಹೇಳಿಕೆಗಳ ಕುರಿತು ಚರ್ಚೆ ನಡೆಯಿತು. ಇದನ್ನೂ ಓದಿ: ಕಾಂಗ್ರೆಸ್ ಶಾಸಕರಿಗೆ ಮಂಪರು ಪರೀಕ್ಷೆ ಮಾಡಿಸಿದ್ರೆ ಸತ್ಯ ಹೊರ ಬರುತ್ತೆ: ಕೋರ್ಟ್‌ಗೆ ಸಿ.ಟಿ ರವಿ ಮನವಿ
Advertisement
Advertisement
ಸಭೆ ಪ್ರಾರಂಭವಾಗುತ್ತಿದ್ದಂತೆ ರೇಷನ್ ಕಾರ್ಡ್ ಗೊಂದಲದ ಬಗ್ಗೆ ಸಿಎಂ ಸಭೆಯಲ್ಲಿ ಚರ್ಚೆ ಶುರು ಮಾಡಿದರು. ಎಪಿಎಲ್-ಬಿಪಿಎಲ್ ಕಾರ್ಡ್‌ಗೆ ಸಂಬಂಧಿಸಿದಂತೆ ಗೊಂದಲ ನಿವಾರಣೆ ಮಾಡುವಂತೆ ಸಚಿವ ಮುನಿಯಪ್ಪಗೆ ಸಿಎಂ ಸೂಚನೆ ನೀಡಿದರು. ಬಿಪಿಎಲ್ ಕಾರ್ಡ್ ರದ್ದಾಗಿದೆ ಅಂತ ವಿಪಕ್ಷಗಳು ವಿವಾದ ಮಾಡ್ತಿವೆ. ಇದಕ್ಕೆ ಅಂಕಿ-ಅಂಶಗಳ ಸಮೇತ ಉತ್ತರ ಕೊಡಬೇಕು ಎಂದು ಹೇಳಿದರು. ಇದನ್ನೂ ಓದಿ: ನಾವು ಜಾತಿ ಸಮೀಕ್ಷೆ ನಡೆಸುತ್ತೇವೆ, ಅವಕಾಶ ವಂಚಿತರಿಗೆ ಇದರಿಂದ ಲಾಭವಾಗಲಿದೆ: ರಾಹುಲ್ ಗಾಂಧಿ
Advertisement
Advertisement
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮುನಿಯಪ್ಪ, ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಯಾವುದೂ ರದ್ದಾಗಿಲ್ಲ. ಆದಾಯ ತೆರಿಗೆ ಪಾವತಿ ಮಾಡೋರು ಮತ್ತು ಸರ್ಕಾರಿ ನೌಕರರಿಗೆ ಮಾತ್ರ ಕಡಿತ ಮಾಡಿದ್ದೇವೆ. ಬಿಪಿಎಲ್ ಕಾರ್ಡ್‌ಗೆ ಅರ್ಹತೆ ಇಲ್ಲದೇ ಇರೋರನ್ನ ಎಪಿಎಲ್ ಕಾರ್ಡ್‌ಗೆ ಶಿಫ್ಟ್ ಮಾಡ್ತಿದ್ದೇವೆ. ಕಾರ್ಡ್ ರದ್ದು ಮಾಡ್ತಿಲ್ಲ. 11 ಲಕ್ಷ ಕಾರ್ಡ್ ರದ್ದಾಗಿದೆ ಅನ್ನೋದು ಬಿಜೆಪಿ ಸುಳ್ಳಿನ ಆರೋಪ ಅಂತ ಸಿಎಂಗೆ ಮಾಹಿತಿ ನೀಡಿದರು.
ಇದೇ ವೇಳೆ ಅಧಿಕಾರಿಗಳ ಸಭೆ ಮಾಡಿ ಗೊಂದಲ ನಿವಾರಣೆ ಮಾಡುವಂತೆ ಮುನಿಯಪ್ಪಗೆ ಸಿಎಂ ಮತ್ತೆ ಸೂಚನೆ ನೀಡಿದರು, ಇದಕ್ಕೆ ಪ್ರತಿಕ್ರಿಯಿಸಿ, ಒಂದು ವೇಳೆ ಅರ್ಹರ ಕಾರ್ಡ್ ರದ್ದಾಗಿದ್ದರೆ ಮರು ಅರ್ಜಿ ಹಾಕೋ ವ್ಯವಸ್ಥೆ ಮಾಡ್ತೀವಿ. ಅದು ಯಾವ ರೀತಿ ಮಾಡಬೇಕು ಅಂತ ಅಧಿಕಾರಿಗಳ ಜೊತೆ ಸಭೆ ಮಾಡಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ವಿಮಾನ ಪ್ರಯಾಣದಲ್ಲಿ ದಾಖಲೆ – ನ.17 ರಂದು ಒಂದೇ ದಿನ 5 ಲಕ್ಷಕ್ಕೂ ಹೆಚ್ಚು ಜನ ಪ್ರಯಾಣ